ಇತರೆ

ಪಾದಯಾತ್ರೆ ತೆರಳುತ್ತಿದ್ದಾಗ ಚಿರತೆ ಕಾಡಿಗೆ ಎಳೆದೊಯ್ದು 8 ವರ್ಷದ ಬಾಲಕ ಬಲಿ

Views: 47

ಕನ್ನಡ ಕರಾವಳಿ ಸುದ್ದಿ ಸುದ್ದಿ: ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾದೇಶ್ವರ ಸ್ವಾಮಿ ದರ್ಶನಕ್ಕೆಂದು ಪಾದಯಾತ್ರೆ ತೆರಳುತ್ತಿದ್ದ ಬಾಲಕನ ಮೇಲೆ ಚಿರತೆ ದಾಳಿ ನಡೆಸಿ ತಿಂದು ತೇಗಿರುವ ಘಟನೆ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಈ ಘಟನೆ ನಡೆದಿದೆ. ಬೆಂಗಳೂರು ಮೂಲದ 8 ವರ್ಷದ ಬಾಲಕ ಹರ್ಷಿತ್ ಮೃತ ದುರ್ದೈವಿ.

ಹರ್ಷಿತ್ ತನ್ನ ಪೋಷಕರೊಂದಿಗೆ ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಪಾದಯಾತ್ರೆ ತೆರಳುತ್ತಿದ್ದ. ಇಂದು ಮುಂಜಾನೆ ಸುಮಾರು 7 ಗಂಟೆಯ ವೇಳೆಗೆ ದಟ್ಟ ಅರಣ್ಯದ ಹಾದಿಯಲ್ಲಿ ಸಾಗುತ್ತಿದ್ದಾಗ, ಚಿರತೆ ದಾಳಿ ನಡೆಸಿದ್ದು, ಬಾಲಕನನ್ನು ಕಾಡಿಗೆ ಎಳೆದೊಯ್ದಿದೆ. ಪೋಷಕರು, ಪಾದಯಾತ್ರೆಯಲ್ಲಿದ್ದ ಭಕ್ತರು ಕಿರುಚಾಡಿದರೂ ಪ್ರಯೋಜನವಾಗಿಲ್ಲ. ದಾರಿಯಿಂದ ಸ್ವಲ್ಪ ದೂರದಲ್ಲಿ ಕಾಡಿನಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಚಿರತೆ ಬಾಲಕನ ಅರ್ಧ ದೇಹವನ್ನು ತಿಂದು ಹಾಕಿದೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಮತ್ತು ಮಲೆ ಮಹದೇಶ್ವರ ಬೆಟ್ಟದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Related Articles

Back to top button
error: Content is protected !!