ಯುವಜನ

ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಪಿಯುಸಿ ವಿದ್ಯಾರ್ಥಿನಿ ದುರ್ಮರಣ: 25 ಲಕ್ಷ ರೂ. ಪರಿಹಾರಕ್ಕೆ ಒತ್ತಾಯ

Views: 121

ಕನ್ನಡ ಕರಾವಳಿ ಸುದ್ದಿ: ದ್ವಿತೀಯ ಪಿಯು ವಿದ್ಯಾರ್ಥಿನಿ ಭೂಮಿಕಾ ಸಾವಿನ ಪ್ರಕರಣ ತನಿಖೆಗೊಳಪಡಿಸಬೇಕು. ಮೃತಳ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕೆಂದು ಒತ್ತಾಯಿಸಿ ಸಿಪಿಐ(ಎಂಎಲ್) ಲಿಬರೇಷನ್ ವತಿಯಿಂದ ಸೋಮವಾರ ತಹಸಿಲ್ ಕಚೇರಿ ಶಿರಸ್ತೇದಾರ್ ಶಿವಾನಂದಗೆ ಮನವಿ ಸಲ್ಲಿಸಲಾಯಿತು.

ಘಟನೆ ವಿವರ: ಕಾಲೇಜು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರ ಮೇಲೆ ಕಾರು ಹರಿದ ಪರಿಣಾಮ ಒಬ್ಬ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಗಂಗಾವತಿ ಮುಖ್ಯ ರಸ್ತೆಯ ಎವಿಎಸ್ ಬ್ರಿಲಿಯಂಟ್ ಕಾಲೇಜು ಸಮೀಪ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಭೂಮಿಕಾ ಎಂದು ಗುರುತಿಸಲಾಗಿದ್ದು,ಗಾಯಗೊಂಡ ವಿದ್ಯಾರ್ಥಿನಿಯರಾದ ಮಹೇಶ್ವರಿ, ಮೇಘನಾ ಹಾಗೂ ಜಹೀಬ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ನಗರದ ಶಾಂತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ವರೂ ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಎವಿಎಸ್ ಬ್ರಿಲಿಯಂಟ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು.

 

Related Articles

Back to top button
error: Content is protected !!