ಜನಮನ
5ನೇ ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿನಿ ಸಾವು

Views: 0
ನಗರದ ಶಿವಭಾಗ್ ನಲ್ಲಿರುವ ಅಪಾರ್ಟ್ ಮೆಂಟಿನ 5ನೇ ಮಹಡಿಯಿಂದ ಮೆಡಿಕಲ್ ವಿದ್ಯಾರ್ಥಿನಿಯೊಬ್ಬರು ಜಾರಿ ಬಿದ್ದು ಮೃತ ಪಟ್ಟ ಘಟನೆ ಜು. 31ರಂದು ಬೆಳಿಗ್ಗೆ ಮಂಗಳೂರಿನಲ್ಲಿ ನಡೆದಿದೆ.
ವಿದ್ಯಾರ್ಥಿನಿ ಸಮಯ (21) ಮೃತಪಟ್ಟವರು.
ಸಮಯ ಅವರು ತಾಯಿ ಕಾರ್ ವಾಶ್ ಮಾಡಲು ನೆಲಮಹಡಿಗೆ ಬಂದ ಸಂದರ್ಭದಲ್ಲಿ ಮಹಡಿಯಿಂದ ಕೆಳಗೆ ಬಾಗಿ ಬಿದ್ದಿದ್ದಾರೆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.
ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಹಸ್ತಾಂತಸಲಾಗಿದೆ.ಪ್ರಕರಣ ಕದ್ರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.






