ಜನಮನ

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್..! ಮೇ, ಜೂನ್ ತಿಂಗಳ ಪಡಿತರ ಒಟ್ಟಿಗೆ ವಿತರಣೆ

Views: 77

ಕನ್ನಡ ಕರಾವಳಿ ಸುದ್ದಿ: ಕೇಂದ್ರ ಸರ್ಕಾರವು ದೇಶದಲ್ಲಿ ಮುಂಬರುವ ಖರೀದಿ ಋತುವಿನ ಹಿನ್ನಲೆಯಲ್ಲಿ ಮತ್ತು ಪರಿಣಾಮಕಾರಿ ಲಾಜಿಸ್ಟಿಕ್ಸ್ ಮತ್ತು ಸಂಗ್ರಹಣೆಗಾಗಿ ರಾಜ್ಯಗಳು ಎದುರಿಸುತ್ತಿರುವ ಅಡಚಣೆಗಳಿಂದಾಗಿ ಎನ್‌ಎಫ್‌ಎಸ್‌ಎ ಅಡಿಯಲ್ಲಿ ಮೇ ಮತ್ತು ಜೂನ್-2026 ರ ಎರಡು ಮಾಹೆಗಳ ಅಹಾರಧಾನ್ಯ ಹಂಚಿಕೆಯನ್ನು ಮುಂಗಡವಾಗಿ ಎತ್ತುವಳಿ ಮಾಡಿ ಕೂಡಲೇ ವಿತರಣೆ ಮಾಡುವಂತೆ ರಾಜ್ಯಗಳಿಗೆ ಸೂಚಿಸಿದೆ. ಈ ಪ್ರಯುಕ್ತ ಮೇ ಮತ್ತು ಜೂನ್ರ ತಿಂಗಳ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್) ಹಂಚಿಕೆಯನ್ನು ಮೇ ತಿಂಗಳಲ್ಲಿ ವಿತರಿಸಲು ಸರ್ಕಾರವು ನಿರ್ದೇಶನ ನೀಡಿರುತ್ತದೆ.

ಅಂತ್ಯೋದಯ ಪಡಿತರ ಚೀಟಿದಾರರಿಗೆ ಮೇ ಮತ್ತು ಜೂನ್ ತಿಂಗಳಿಗೆ ಒಟ್ಟು 70 ಕೆ. ಜಿ., ಆದ್ಯತ ಪಡಿತರ ಚೀಟಿದಾರರಿಗೆ (ಕೇಂದ್ರ) ಪ್ರತಿ ಸದಸ್ಯರಿಗೆ ಒಟ್ಟು 10 ಕೆ. ಜಿ. (ರಾಜ್ಯ) ಪ್ರತಿ ಸದಸ್ಯರಿಗೆ 10 ಕೆ. ಜಿ. ವಿತರಣೆಯಾಗಲಿದೆ. ಎರಡು ಕಂತಿನಲ್ಲಿ ಇದರ ವಿತರಣೆ ನಡೆಯಲಿದೆ.

ಪಡಿತರ ಚೀಟಿದಾರರು ಸಂಬಂಧಿಸಿದ ನ್ಯಾಯಬೆಲೆ ಅಂಗಡಿಯಲ್ಲಿ ಮೇ ಮತ್ತು ಜೂನ್ ತಿಂಗಳ ಪ್ರತ್ಯೇಕವಾಗಿ ಎರಡು ಬಾರಿ ಬಯೋ ನೀಡಿ ಪಡಿತರ ಪಡೆಯಬೇಕು. ಮೇ ಹಾಗೂ ಜೂನ್ ತಿಂಗಳ ಎನ್.ಎಫ್.ಎಸ್.ಎ. ಹಂಚಿಕೆ ಪಡೆಯಲು ಮೇ 31 ಕೊನೆಯ ದಿನ. ಪಡಿತರ ವಿತರಣೆ ಬಗ್ಗೆ ಏನಾದರೂ ದೂರುಗಳು ಇದ್ದಲ್ಲಿ ಕೇಂದ್ರ ಸಹಾಯವಾಣಿ ಸಂಖ್ಯೆ 1967ಕ್ಕೆ ಕರೆ ಮಾಡಬಹುದು ಅಥವಾ ಹತ್ತಿರದ ಆಹಾರ ಇಲಾಖೆಯ ಕಚೇರಿಗೆ ಭೇಟಿ ನೀಡಿ ದೂರು ನೀಡಬಹುದು. ಜಿಲ್ಲೆಯ ಎಲ್ಲ ನ್ಯಾಯಬೆಲೆ ಅಂಗಡಿದಾರರು ನ್ಯಾಯಬೆಲೆ ಅಂಗಡಿಯಲ್ಲಿ ನಿಗದಿತ ಪ್ರಮಾಣದಲ್ಲಿ ಪಡಿತರ ಚೀಟಿದಾರರಿಗೆ ಆಹಾರ ಧಾನ್ಯ ವಿತರಣೆ ಮಾಡಬೇಕು ಎಂದು  ಪ್ರಕಟಣೆ ತಿಳಿಸಿದೆ.

 

Related Articles

Back to top button
error: Content is protected !!