ಶಿಕ್ಷಣ
ಜನಗಣತಿ ವೇಳೆ ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ: ಶಿಕ್ಷಕಿ ಸಾವು
Views: 61
ಕನ್ನಡ ಕರಾವಳಿ ಸುದ್ದಿ: ಸಿದ್ದಾಪುರ-ಶಿರಸಿ ಮುಖ್ಯ ರಸ್ತೆಯ ಮಳವತ್ತಿ ಹತ್ತಿರ ಟ್ರ್ಯಾಕ್ಟರ್ ಹಾಗೂ ಸ್ಕೂಟಿ ನಡುವೆ ಡಿಕ್ಕಿ ಸಂಭವಿಸಿ ಶಿಕ್ಷಕಿ ಪೂರ್ಣಿಮಾ ಗಣಪತಿ ಭಟ್ಟ(47) ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ.
ಪಟ್ಟಣದ ಹೊಸೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿರುವ ಪೂರ್ಣಿಮಾ ಜನಗಣತಿ ಮಾಹಿತಿಯನ್ನು ಪಟ್ಟಣ ಪಂಚಾಯಿತಿಗೆ ನೀಡಲು ಹೋಗುತ್ತಿರುವಾಗ ಈ ಘಟನೆ ನಡೆದಿದೆ.
ಗಾಯಗೊಂಡಿದ್ದ ಶಿಕ್ಷಕಿಯನ್ನು ಸಿದ್ದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಪೂರ್ಣಿಮಾ ಪಟ್ಟಣದ ಕೋಲಸಿರ್ಸಿ ಕ್ರಾಸ್ ಹತ್ತಿರದ ಬಸವಗಿರಿ ನಿವಾಸಿಯಾಗಿದ್ದಾರೆ.






