ಇತರೆ
ಭಾರಿ ಗಾಳಿ -ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ನಾಲ್ವರು ಜೀವಂತ ಸಮಾಧಿ
Views: 90
ಕನ್ನಡ ಕರಾವಳಿ ಸುದ್ದಿ:ಭಾರಿ ಗಾಳಿ ಸಹಿತ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಪತಿ – ಪತ್ನಿ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ಗುರುವಾರ ರಾತ್ರಿ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ನಡೆದಿದೆ.
ಮೋರಟಗಿ ಗ್ರಾಮದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28) ಕಾಳಮ್ಮ ಬಡಿಗೇರ (13) ಕೀರ್ತಿ ಬಡಿಗೇರ (9) ಮೃತರು.
ತಮ್ಮ ಮನೆಯ ದುರಸ್ತಿ ಮಾಡುತ್ತಿದ್ದ ಕಾರಣ ಕುಟುಂಬವು ಹಳೆಯ ಮನೆಯಲ್ಲಿ ಬಾಡಿಗೆಗೆ ಇತ್ತು. ನಿನ್ನೆ ರಾತ್ರಿ ಭಾರಿ ಗಾಳಿ ಸಹಿತ ಸುರಿದ ಮಳೆಗೆ ಮನೆಯ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದಿದೆ. ಪರಿಣಾಮ ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿಯಾಗಿದ್ದಾರೆ. ಸುದ್ದಿ ತಿಳಿದು ತಕ್ಷಣ ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಅಗ್ನಿಶಾಮಕ ದಳ ಸಿಬ್ಬಂದಿ ಕೂಡ ಸ್ಥಳಕ್ಕೆ ಆಗಮಿಸಿದ್ದು, ಮಣ್ಣಿನಲ್ಲಿ ಸಿಲುಕಿರುವ ಮೃತರ ಶವಗಳನ್ನು ಹೊರ ತೆಗೆಯಲಾಗಿದೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.






