ಇತರೆ

ದೇವಸ್ಥಾನಕ್ಕೆ ಟ್ರ್ಯಾಕ್ಟರ್‌ನಲ್ಲಿ ಹೋಗುತ್ತಿದ್ದಾಗ ಟ್ಯಾಂಕರ್‌ ಡಿಕ್ಕಿ: 7 ಮಂದಿ ಸಾವು 

Views: 24

ಕನ್ನಡ ಕರಾವಳಿ ಸುದ್ದಿ: ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್, ಸೇತುವೆ ಮೇಲಿಂದ ಕೆಳಗೆ ಬಿದ್ದು ಒಂದೇ ಕುಟುಂಬದ ಏಳು ಜನ ಸ್ಥಳದಲ್ಲೇ ಮೃತಪಟ್ಟುಮ ಹಲವರು ಗಾಯಗೊಂಡಿದ್ದಾರೆ. ತುಂಗಭದ್ರಾ ಸೇತುವೆ ಬಳಿ ದುರಂತ ಸಂಭವಿಸಿದೆ.

ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಮೃತಪಟ್ಟ ದುರ್ದೈವಿಗಳು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರಲಯನಹಳ್ಳಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.

ಒಂದೇ ಕುಟುಂಬದ ಸದಸ್ಯರು ಮತ್ತು ಅವರ ಸಂಬಂಧಿಕರು ಸೇರಿ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಪ್ಪಳದ ಹುಲಿಗಮ್ಮ ದೇವಸ್ಥಾನಕ್ಕೆ ಟ್ರ್ಯಾಕ್ಟರ್‌ನಲ್ಲಿ ಹೋಗುತ್ತಿದ್ದಾಗ ಅಪಘಾತ ನಡೆದಿದೆ.

ಘಟನೆಯ ವಿಷಯ ತಿಳಿಯುತ್ತಿದ್ದಂತೆ ಮುನಿರಾಬಾದ್ ಠಾಣೆ ಪೋಲಿಸರು ಹಾಗೂ ವಿಜಯನಗರ ಠಾಣೆ ಪೋಲೀಸರು ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ.

Related Articles

Back to top button
error: Content is protected !!