ರಾಜಕೀಯ

ಡಿಕೆಶಿ ವಿರುದ್ಧದ ಸಿಬಿಐ ತನಿಖೆಗೆ ತಡೆ: ಹೈಕೋರ್ಟ್ ಆದೇಶಕ್ಕೆ ಮಧ್ಯಪ್ರವೇಶಿಸದ ಸುಪ್ರೀಂ ಕೋರ್ಟ್

Views: 1

ಪ್ರಮುಖ ಆರೋಪ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್ ಆದೇಶದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಮೂಲಕ ಡಿಕೆಸಿ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದಂತಾಗಿದೆ.

ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಸಿಬಿಐ ಸಲ್ಲಿಸಿದ ಮೇಲ್ಮನವಿಯನ್ನು ನ್ಯಾಯಮೂರ್ತಿ ಬಿ.ಆರ್ ಗವಾಯಿ,ನ್ಯಾಯಮೂರ್ತಿ ಸಿಟಿ ರವಿಕುಮಾರ್, ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ಪೀಠ ವಜಾ ಗೊಳಿಸಿದೆ.

ಡಿಕೆಶಿ ಪರ ವಕೀಲ ಅಭಿಷೇಕ್ ಸಿಂಘ್ವಿ ಹೈಕೋರ್ಟಿನ ಮಧ್ಯಂತರ ಆದೇಶದ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಸಿದೆ. ಆದರೆ ಹೈಕೋರ್ಟ್ ವಿಭಾಗೀಯ ಪೀಠ ನೀಡಿದ ಮಧ್ಯಂತರ ಆದೇಶಗಳನ್ನು ಪ್ರಶ್ನಿಸಲು ನಿರಾಕರಿಸಿದೆ ಎಂದು ಹೇಳಿದೆ.

ಈ ಮಧ್ಯೆ ಸುಪ್ರೀಂ ಕೋರ್ಟ್ ತಾನು ಮಧ್ಯಪ್ರವೇಶಸಲು ಹೋಗುವುದಿಲ್ಲ ಎಂದಿದೆ. ತ್ವರಿತಗತಿಯಲ್ಲಿ ಪ್ರಕರಣ ಇತ್ಯರ್ಥ ಮಾಡಲು ಸಿಬಿಐಗೆ ನೀಡಲಾಯಿತು.

ಏನಿದು ಪ್ರಕರಣ?                                   ಆದಾಯ ತೆರಿಗೆ ಇಲಾಖೆಯು 2017ರಲ್ಲಿ ಡಿಕೆಶಿ ಮೇಲೆ ದಾಳಿ ನಡೆಸಿತ್ತು .ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ಕೂಡ ಅವರ ವಿರುದ್ಧ ತನಿಖೆ ಆರಂಭಿಸಿತ್ತು. ಮೀರಿದ ಆದಾಯ ಗಳಿಸಿದ ಪ್ರಕರಣ ಇದಾಗಿದ್ದು, ಸಿಬಿಐ ತನಿಖೆ ನಡೆಸಲು ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ, ಡಿಕೆಶಿ ಅವರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದರು. ಅವರ ಅರ್ಜಿಯನ್ನು ನ್ಯಾಯಪೀಠ ವಜಾ ಗೊಳಿಸಿತ್ತು. ಆದಾಯ ತೆರಿಗೆ ಕಾನೂನುಗಳ ಪ್ರಕಾರ ದಾಖಲಾಗಿರುವ ವಿಶೇಷ ಕ್ರಿಮಿನಲ್ ಪ್ರಕರಣ ಎಂಬ ಸಿಬಿಐ ವಾದಾಂಶವನ್ನು ಎತ್ತಿ ಹಿಡಿದಿದ್ದ ಏಕ ಸದಸ್ಯ ನ್ಯಾಯ ಪೀಠ ಶಿವಕುಮಾರ ಅರ್ಜಿಯನ್ನು ವಜಾ ಗೊಳಿಸಿತ್ತು.

Related Articles

Back to top button
error: Content is protected !!