ಕರಾವಳಿ

ಜೂ.1ರಿಂದ ಜು.31ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

Views: 22

ಕನ್ನಡ ಕರಾವಳಿ ಸುದ್ದಿ : ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯಿದೆ 1986ರನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಕರ್ನಾಟಕ ಕರಾವಳಿಯಲ್ಲಿ ಯಾಂತ್ರೀಕೃತ ಮೀನುಗಾರಿಕೆಯನ್ನು ಜು.31ರವರೆಗೆ ನಿಷೇಧಿಸಲಾಗಿದೆ.

ಜೂ.1ರಿಂದ ಯಾವುದೇ ಬಲೆಗಳು, ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರ ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆಗೆ ಈ ನಿಷೇಧ ಅನ್ವಯಿಸಲಿದೆ.

ಸರಕಾರಿ ಆದೇಶ ಉಲ್ಲಂಘಿಸುವ ಮೀನುಗಾರಿಕೆ ಬೋಟ್‌ಗಳು ಮತ್ತು ಮೀನುಗಾರರು ಒಂದು ವರ್ಷದ ಅವಧಿಗೆ ಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಎಲ್ಲ ಮೀನುಗಾರರು ಪಾಲಿಸುವಂತೆ ಇಲಾಖೆಯ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Related Articles

Back to top button
error: Content is protected !!