ಇತರೆ

ಉಡುಪಿ: ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ಹೋದ ಯುವತಿ ನಾಪತ್ತೆ 

Views: 50

ಕನ್ನಡ ಕರಾವಳಿ ಸುದ್ದಿ :ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಕಾವ್ಯ (20) ಎಂಬ ಯುವತಿಯು ಪಿ.ಯು.ಸಿ ವ್ಯಾಸಾಂಗ ಮುಗಿಸಿ ಮನೆಯಲ್ಲಿದ್ದು, ಮೇ 19 ರಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ಮಣಿಪಾಲದ ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

4 ಅಡಿ 5 ಇಂಚು ಎತ್ತರ, ಬಿಳಿ ಮೈಬಣ್ಣ, ಕೋಲುಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆಯ ದೂ.ಸಂಖ್ಯೆ: 0820-2570328, ಎಸ್.ಡಿ.ಪಿ.ಓ ದೂ.ಸಂಖ್ಯೆ: 0820-2521257, ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಣಿಪಾಲ ಪೊಲೀಸ್ ಠಾಣೆಯ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

Back to top button
error: Content is protected !!