ಇತರೆ

ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿಗೆ ಎಫ್‌ಎಸ್‌ಎಲ್ ತಂಡ ಭೇಟಿ: ತನಿಖೆ ಮತ್ತೆ ಚುರುಕು 

Views: 52

ಕನ್ನಡ ಕರಾವಳಿ ಸುದ್ದಿ: ಧರ್ಮಸ್ಥಳ ಗ್ರಾಮದ ಬುರುಡೆ ರಹಸ್ಯ ಪ್ರಕರಣದ ತನಿಖೆ ಮತ್ತೆ ಚುರುಕು ಪಡೆದು ಕೊಂಡಿದೆ. 4 ತಿಂಗಳ ಹಿಂದೆ 7 ಅಸ್ಥಿಪಂಜರ ಪತ್ತೆಯಾಗಿದ್ದ ಬಂಗ್ಲೆಗುಡ್ಡೆ ಕಾಡಿಗೆ ವಿಧಿವಿಜ್ಞಾನ ಪ್ರಯೋಗಾಲಯ ತಂಡ (ಎಫ್‌ಎಸ್‌ಎಲ್) ಭೇಟಿ ನೀಡಿದೆ.

ಮೂವರು ಅಧಿಕಾರಿಗಳನ್ನೊಳಗೊಂಡ ಎಫ್‌ಎಸ್‌ಎಲ್ ಅಧಿಕಾರಿಗಳ ತಂಡ ಗುರುವಾರ ಬೆಂಗಳೂರಿನಿಂದ ಎಸ್‌ಐಟಿ ಅಧಿಕಾರಿಗಳೊಂದಿಗೆ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿದೆ. 4 ತಿಂಗಳ ಹಿಂದೆ 7 ಅಸ್ಥಿಪಂಜರ ಸಿಕ್ಕಿದ್ದ ಜಾಗದಲ್ಲಿ ಪರಿಶೀಲನೆ ನಡೆಸಿದೆ. ಅಲ್ಲದೇ ಆರೋಪಿ ಪ್ರದೀಪ್ ಕುಲಾಲ್‌ನನ್ನ ಸ್ಥಳಕ್ಕೆ ಕರೆತಂದು ಪರಿಶೀಲನೆ ನಡೆಸಲಾಗಿದೆ.

ಬುರುಡೆ ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಎಸ್‌ಐಟಿ ತಂಡ, 4 ತಿಂಗಳ ಹಿಂದೆ ಬಂಗ್ಲೆಗುಡ್ಡೆ ಅರಣ್ಯದಲ್ಲಿ ಉತ್ಪನನ ಕೈಗೊಂಡಿತ್ತು. ಸೆ.17 ರಂದು 5 ಅಸ್ಥಿಪಂಜರ, ಸೆ.18 ರಂದು 2 ಅಸ್ಥಿಪಂಜರ ಪತ್ತೆಯಾಗಿತ್ತು. ಎಲ್ಲವೂ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿತ್ತು. ಈ ಅಸ್ಥಿಗಳನ್ನು ಬೆಳ್ತಂಗಡಿ ಎಸ್‌ಐಟಿ ಕಚೇರಿಯಿಂದ ಹೆಚ್ಚಿನ ತನಿಖೆಗಾಗಿ ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕೇಂದ್ರಕ್ಕೆ ಅಸ್ಥಿಪಂಜರಗಳ ರವಾನೆ ಮಾಡಲಾಗಿತ್ತು.

ಇದಕ್ಕೂ ಪರಿಚಿತ ಬುರುಡೆಗಳ ಪತ್ತೆ ಕೇಸ್ ಸಂಬಂಧ ಎಫ್‌ಎಸ್ಎಲ್ ತಂಡ ಗುರುವಾರ ಧರ್ಮಸ್ಥಳ ಪರಿಸರದಲ್ಲಿ ಪರಿಶೀಲನೆ ನಡೆಸಿತು.ಮುನ್ನ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನ ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸಿದ್ದ ಎಸ್‌ಐಟಿ ಕಳೆದ ನ.20ರಂದು ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾ ಲಯಕ್ಕೆ ತನಿಖಾ ಪ್ರಾಥಮಿಕ ವರದಿ ಸಲ್ಲಿಸಿತ್ತು. ಈ ವೇಳೆ ಶೀಘ್ರವೇ ತನಿಖೆ ನಡೆಸಿ ಪೂರ್ಣ ವರದಿ ಸಲ್ಲಿಸುವಂತೆ ಕೋರ್ಟ್ ಸೂಚನೆ ನೀಡಿತ್ತು.

Related Articles

Back to top button
error: Content is protected !!