ಜನಮನ

ಮನೆಯ ಮಹಡಿ ಮೇಲಿನಿಂದ ಕಾಲು ಜಾರಿ ಬಿದ್ದು ಆಟೋ ಚಾಲಕ ಸಾವು

Views: 0

ಮನೆಯ ಮಹಡಿ ಮೇಲಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಆಟೋ ಚಾಲಕನೊಬ್ಬ ಮೃತಪಟ್ಟ ಘಟನೆ ಬಂಟ್ವಾಳದ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ನಡೆದಿದೆ.

ಬಾನಗುಂಡಿ ನಿವಾಸಿ ಆಟೋ ಚಾಲಕ ಕಾಂತಪ್ಪ ಮೂಲ್ಯ( 48) ಮೃತಪಟ್ಟವರು.

ಆಟೋ ಚಾಲಕ ಹೊಸಮನೆ ನಿರ್ಮಾಣ ಮಾಡುತ್ತಿದ್ದು, ಮನೆಯ ಮಹಡಿ ಮೇಲೆ ಹೋಗಿದ್ದ ಅವರು ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

Related Articles

Back to top button
error: Content is protected !!