ಇತರೆ

ಆಟೋ ರಿಕ್ಷಾ-ಬೈಕ್ ನಡುವೆ ಅಪಘಾತ: ಮಗು ಸೇರಿ ದಂಪತಿ ದುರ್ಮರಣ

Views: 30

ಕನ್ನಡ ಕರಾವಳಿ ಸುದ್ದಿ: ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ರೈಲು ನಿಲ್ದಾಣದ ಬಳಿ ನಡೆದಿದೆ.

ಮೃತರನ್ನು ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದ ನಿವಾಸಿಗಳಾದ ಬೈಕ್‌ ಸವಾರ ಮಹಾಂತೇಶ್ ಮಾನೆ, ಅವರ ಪತ್ನಿ ಸಾಕ್ಷಿ ಮಾನೆ ಹಾಗೂ 6 ತಿಂಗಳ ಮಗು ಎಂದು ಗುರುತಿಸಲಾಗಿದೆ.

ಮೂವರು ಬೈಕ್‌ನಲ್ಲಿ ಸಂತೆಗೆ ತೆರಳಿ ವಾಪಸ್ ಬರುವಾಗ ಈ ಅವಘಡ ಸಂಭವಿಸಿದೆ ಎನ್ನಲಾಗ್ತಿದೆ.ಬೈಕ್ ಎದುರಿಗೆ ಬರ್ತಿದ್ದ ಗೂಡ್ಸ್ ಆಟೋಗೆ ಡಿಕ್ಕಿ ಹೊಡೆದಿದ್ದು, ಸ್ಥಳಕ್ಕೆ ರಾಯಬಾಗ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

Related Articles

Back to top button
error: Content is protected !!