ಇತರೆ

ಕಾರಿನ ಟೈರ್ ಸ್ಪೋಟಗೊಂಡು ಲಾರಿಗೆ ಡಿಕ್ಕಿ: ಸ್ಥಳದಲ್ಲೇ ಐವರು ಸಾವು 

Views: 69

ಕನ್ನಡ ಕರಾವಳಿ ಸುದ್ದಿ: ತುಮಕೂರು ಜಿಲ್ಲೆ‌ಯ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಬಳಿ ಲಾರಿಗೆ ಕಾರು ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಳೆದ ರಾತ್ರಿ ಸಂಭವಿಸಿದೆ.

ಕಾರಿನ ಟೈರ್ ಸ್ಪೋಟಗೊಂಡು ಲಾರಿಗೆ ಡಿಕ್ಕಿ ಹೊಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಚಳ್ಳಕೆರೆಯ ಛಾಯಾಗ್ರಾಹಕ ರಾಘವೇಂದ್ರ, ರುದ್ರೇಶ್, ಸೋಮ, ಮಲ್ಲಿಕಾರ್ಜುನ, ಪ್ರಮೋದ್ ಮೃತಪಟ್ಟಿದ್ದಾರೆ.

ಪಿಎಸ್ಐ ಮಹೇಶ್ ಹೊಸಪೇಟ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!