ಗುರು ಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಗುರುನಮನ -26 ಶಿಕ್ಷಕರ ಕಾರ್ಯಗಾರ
Views: 15
ಕನ್ನಡ ಕರಾವಳಿ ಸುದ್ದಿ: ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಶಿಕ್ಷಕರಿಗಾಗಿ ಗುರುನಮನ -26 ಎಂಬ ಶಿಕ್ಷಕರ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಆಧುನಿಕ ಶಿಕ್ಷಣ ಪದ್ಧತಿಗೆ ಅನುಗುಣವಾಗಿ ಶಿಕ್ಷಕರ ಕೌಶಲ್ಯ ಅಭಿವೃದ್ಧಿಗೆ ಪೂರಕವಾದ ಈ ಕಾರ್ಯಗಾರವನ್ನು ಶ್ರೀ ಸತೀಶ್ ಆರ್ ಬಂಗೇರ ಇಂಗ್ಲೀಷ ಉಪನ್ಯಾಸಕರು ಮೂಡುಬಿದರೆ ಇವರು ಉದ್ಘಾಟಿಸಿ ಮಾತನಾಡುತ್ತ -“ ದೇಶದ ಬೆನ್ನೆಲುಬಾದ ಶಿಕ್ಷಕರು ಇಡೀ ಸಮಾಜದ ಆರೋಗ್ಯಕರ ಬೆಳವಣಿಗೆಗೆ ಶ್ರಮಿಸುವವರು. ಶಿಕ್ಷಕ ವೃತ್ತಿ ಬೇರೆ ಎಲ್ಲಾ ಪ್ರತಿಪರ ಬದುಕನ್ನು ಸೃಷ್ಟಿಸುತ್ತದೆ. ತರಗತಿಯಲ್ಲಿ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ಹೆಚ್ಚಬೇಕಾದರೆ ಶಿಕ್ಷಕರ ಕಲಿಕಾ ಸಾಮರ್ಥ್ಯ ಅರ್ಥಪೂರ್ಣವಾಗಿರಬೇಕು. ವರ್ತಮಾನದ ಶಿಕ್ಷಕರ ಸಮಸ್ಯೆಗಳು ಪರಿಹಾರಗೊಂಡಾಗ ಆರೋಗ್ಯಕರ ವಾತಾವರಣ ಸೃಷ್ಟಿಯಾಗಲು ಸಾಧ್ಯ ಎಂದರು.”
ಬಾಂಡ್ಯ ಎಜುಕೇಶನಲ್ ಟ್ರಸ್ಟ್ ನ ಜಂಟಿ ಕಾರ್ಯನಿರ್ವಾಹಕರಾದ ಶ್ರೀಮತಿ ಅನುಪಮಾ ಎಸ್ ಶೆಟ್ಟಿ ರವರು ಈ ಕಾರ್ಯಗಾರಕ್ಕೆ ಶುಭ ಕೋರಿದರು.
ಪ್ರಾಂಶುಪಾಲರಾದ ಡಾ. ರೂಪಾ ಶೆಣೈ ರವರು ಪ್ರಸ್ತಾವಿಕವಾಗಿ ಮಾತನಾಡಿ – “ ಶಿಕ್ಷಕರು ಶಾಶ್ವತ ವಿದ್ಯಾರ್ಥಿಗಳು. ಅವರ ಕಲಿಕೆಗೆ ಕೊನೆ ಎಂಬುದಿಲ್ಲ. ಶಿಕ್ಷಕರ ಕಲಿಕಾ ಸಾಮರ್ಥ್ಯ ಮತ್ತು ಕೌಶಲ್ಯಗಳನ್ನು ಹೆಚ್ಚಿಸಲು ಇಂತಹ ಕಾರ್ಯಗಾರಗಳು ಮಹತ್ವದ ಪಾತ್ರ ವಹಿಸುತ್ತದೆ ಎಂದರು. ಕುಮಾರಿ ಸಂಧ್ಯಾ ರವರು ಪ್ರಾರ್ಥಿಸಿದರೆ, ಶಿಕ್ಷಕಿ ಶ್ರೀಮತಿ ಸುಮಲತಾ ಭಂಡಾರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.






