ಇತರೆ

ಭೀಕರ ಸರಣಿ ರಸ್ತೆ ಅಪಘಾತ; ರಸ್ತೆ ಬದಿ ನಿಂತಿದ್ದ ಲಾರಿಗೆ ಆಟೋ ಡಿಕ್ಕಿ, ಐವರು ಕೂಲಿ ಕಾರ್ಮಿಕರ ಸಾವು

Views: 89

ಕನ್ನಡ ಕರಾವಳಿ ಸುದ್ದಿ: ಕಾರು ಆಟೋ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಸ್ಥಳದಲ್ಲೇ 5 ಮಂದಿ ಸಾವನ್ನಪ್ಪಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಯ ರಾಷ್ಟ್ರೀಯ ಹೆದ್ದಾರಿ ಸುಂಕಲಮ್ಮ ದೇವಸ್ಥಾನ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಆಟೋದಲ್ಲಿದ್ದ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಆಟೋದಲ್ಲಿ 8 ಮಂದಿ ಕೂಲಿ ಕೆಲಸಕ್ಕೆ ಹೊರಟ್ಟಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಇನ್ನುಳಿದ ಕೂಲಿ ಕಾರ್ಮಿಕರಿಗೂ ತೀವ್ರ ಸ್ವರೂಪದ ಗಾಯವಾಗಿದ್ದು, ಗಾಯಾಳುಗಳನ್ನು ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆ ಸೇರಿಸಲಾಗಿದೆ.

ಮೊದಲಿಗೆ ಥಾರ್ ಕಾರು ಆಟೋಗೆ ಡಿಕ್ಕಿ ಹೊಡೆದಿದೆ, ಡಿಕ್ಕಿಯಿಂದಾಗಿ ನಿಯಂತ್ರಣ ತಪ್ಪಿದ ಆಪೆ ಆಟೋ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿದೆ. ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಘಟನೆ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ವೇಗವಾಗಿ ಬರುತ್ತಿದ್ದ ಥಾರ್ ಕಾರು ಮುಂಬದಿಯಲ್ಲಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಇದರಿಂದ ನಿಯಂತ್ರಣ ಕಳೆದುಕೊಂಡ ಆಟೋ ಚಾಲಕ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಆಟೋದಲ್ಲಿ ಒಬ್ಬ ಪುರುಷ ಸೇರಿದಂತೆ 8 ಮಂದಿ ಮಹಿಳೆಯರಿದ್ದರು. ಅಪಘಾತದಿಂದಾಗಿ ನಾಲ್ವರು ಮಹಿಳೆಯರು, ಓರ್ವ ಪುರುಷ ಸೇರಿದಂತೆ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದರು.

ಆಟೋಗೆ ಡಿಕ್ಕಿ ಹೊಡೆದ ಥಾರ್ ಕಾರು ಚಾಲಕ ಕಾರನ್ನು ರಸ್ತೆ ಬದಿಯಲ್ಲಿಯೇ ನಿಲ್ಲಿಸಿ ಪರಾರಿಯಾಗಿದ್ದಾನೆ. ಆತನ ಸುಳಿವು ಪತ್ತೆಯಾಗಿದ್ದು, ತಕ್ಷಣವೇ ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು, ಹಾಗೆಯೇ ರಸ್ತೆ ಬದಿಯಲ್ಲಿ ನಿಲ್ಲಿಸಿದ ಲಾರಿ ಚಾಲಕನ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

Related Articles

Back to top button
error: Content is protected !!