ಯುವಜನ
ಆರ್ಸಿಬಿ ಸಂಭ್ರಮಾಚರಣೆ ಮುಗಿಸಿ ಬರುತ್ತಿದ್ದ ವೇಳೆ ಅಪಘಾತ: ಯುವಕ ಸಾವು
Views: 52
ಕನ್ನಡ ಕರಾವಳಿ ಸುದ್ದಿ: ಆರ್ಸಿಬಿ ಸತತ 2ನೇ ಬಾರಿಗೆ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದ್ದು, ಸಂಭ್ರಮಾಚರಣೆ ಮುಗಿಸಿ ಮನೆಗೆ ವಾಪಸ್ ಬರುತ್ತಿದ್ದ ಅಭಿಮಾನಿಯೊಬ್ಬ ಸಾವಿಗೀಡಾಗಿರುವ ಘಟನೆ ನಡೆದಿದೆ.
ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಲಕ್ಷ್ಮೀಪುರ ಗ್ರಾಮದ ಬಳಿ 2 ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿದ್ದಾನೆ. ಮನೋಜ್ (21) ಮೃತ ಯುವಕ.
ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮೃತ ಮನೋಜ್ ಚಿತ್ರದುರ್ಗ ಮೂಲದ ನಿವಾಸಿಯಾಗಿದ್ದು, ಮಾಕಳಿಯ ಹೆಗ್ಗಡದೇವನಪುರದಲ್ಲಿ ರೂಮ್ ಮಾಡಿಕೊಂಡು ವಾಸವಿದ್ದ. ಖಾಸಗಿ ಕಂಪನಿಯಲ್ಲಿ ಮೆಷಿನ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಈತ ಮ್ಯಾಚ್ ಮುಗಿಸಿಕೊಂಡು ವಾಪಸ್ ತನ್ನ ರೂಮಿಗೆ ಬರುವಾಗ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ.
ಈ ಘಟನೆ ಸಂಬಂಧ ಚಿಕ್ಕಬಾಣಾವರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ






