ಇತರೆ

ಸಾಸ್ತಾನ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ಸಾವು 

Views: 127

ಕನ್ನಡ ಕರಾವಳಿ ಸುದ್ದಿ: ಸಾಸ್ತಾನ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಸೋಮವಾರ  ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.

ಗಣೇಶ್ ಕರ್ಕೇರ ಅವರು ಸಾಸ್ತಾನ ಜಂಕ್ಷನ್‌ನಲ್ಲಿ ಉಡುಪಿ-ಕುಂದಾಪುರ ರಸ್ತೆಯನ್ನು ದಾಟಿ, ಪಶ್ಚಿಮ ದಿಕ್ಕಿನ ರಸ್ತೆ ದಾಟಲು ಡಿವೈಡರ್‌ನ ತೀರಾ ಅಂಚಿನಲ್ಲಿ ನಿಂತುಕೊಂಡಿದ್ದರು. ಈ ವೇಳೆ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಕಾರು ಗಣೇಶ್ ಅವರಿಗೆ ನೇರವಾಗಿ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಗಣೇಶ್ ಕರ್ಕೇರ ಅವರು ಕಾರಿನೊಂದಿಗೆ ಎಳೆದೊಯ್ಯಲ್ಪಟ್ಟಿದ್ದಾರೆ. ಪರಿಣಾಮವಾಗಿ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಈ ಬಗ್ಗೆ ಕೋಟ ಠಾಣಾ ಪ್ರಕರಣ ದಾಖಲಿಸಲಾಗಿದೆ.

Related Articles

Back to top button
error: Content is protected !!