ರಾಜಕೀಯ
ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಡಿಕೆಶಿ ಪರವಾಗಿ ಕೊರಗಜ್ಜನಿಗೆ ವಿಶೇಷ ಪೂಜೆ ಸಲ್ಲಿಸಿದ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ
Views: 36
ಕನ್ನಡ ಕರಾವಳಿ ಸುದ್ದಿ : ಡಿ.ಕೆ.ಶಿವಕುಮಾರ್ ಅವರು ಬುಧವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದು, ಈ ಹಿನ್ನೆಲೆಯಲ್ಲಿ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರು ಉರ್ವ ಮಾರಿಯಮ್ಮ ದೇವಾಸ್ಥಾನ ಹಾಗೂ ಉರ್ವ ಕೊರಗಜ್ಜನ ಗುಡಿಯಲ್ಲಿ ವಿಶೇಷ ಪೂಜೆ ನೆರವೇರಿಸಿದ್ದಾರೆ.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ, ದೇವಸ್ಥಾನದ ಆಡಳಿತ ಮುಖ್ಯಸ್ಥರು ಹಾಗೂ ಸರ್ವ ಸದಸ್ಯರು, ಕಾಂಗ್ರೆಸ್ ಮುಖಂಡರಾದ ಪ್ರೇಮ್ ಕುಮಾರ್, ಅನಿಲ್ ಕಂಕನಾಡಿ, ಅಕ್ಕಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವಿಧಾನಸಭಾ ಕ್ಷೇತ್ರದ ಶಾಸಕಿ ನಯನ ಮೋಟಮ್ಮ ಅವರು ಸಚಿವರಾಗಲೆಂದು ಮೂಡಿಗೆರೆ ಪಟ್ಟಣದ ಶ್ರೀ ಆದಿಶಕ್ತಿ ದೇವಸ್ಥಾನದಲ್ಲಿ ಕಾಂಗ್ರೆಸ್ ಕುಟುಂಬದ ಯುವ ಕಾರ್ಯಕರ್ತರು ಇಂದು ಪೂಜೆಯನ್ನು ಸಲ್ಲಿಸಿದರು.






