ರಾಜಕೀಯ

ಅಣ್ಣಾಮಲೈ ಬಿಜೆಪಿಗೆ ರಾಜೀನಾಮೆ..ಹೊಸ ರಾಜಕೀಯ ಪಕ್ಷ ಸ್ಥಾಪಿಸಲಿದ್ದಾರಾ?

Views: 61

ಕನ್ನಡ ಕರಾವಳಿ ಸುದ್ದಿ: ತಮಿಳುನಾಡು ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಬಿಜೆಪಿಗೆ ರಾಜೀನಾಮೆ ನೀಡಿ ಹೊರಬಂದಿದ್ದಾರೆ.

ತಮಿಳುನಾಡು ರಾಜಕೀಯದಲ್ಲಿ ಹೊಸದಾಗಿ ಪೀಪಲ್ಸ್ ಮೂವ್‌ಮೆಂಟ್ (People’s Movement) ಅಥವಾ ಹೊಸ ರಾಜಕೀಯ ಪಕ್ಷವೊಂದನ್ನು ಸ್ಥಾಪಿಸಲು ಅವರು ಈ ನಿರ್ಧಾರವನ್ನು ಕೈಗೊಂಡಿದ್ದಾರೆ. ಇತ್ತೀಚೆಗಷ್ಟೇ ಅವರು ಪಕ್ಷದ ಚುನಾವಣಾ ಉಸ್ತುವಾರಿ ಸ್ಥಾನಕ್ಕೂ ಮತ್ತು 2025ರ ಏಪ್ರಿಲ್‌ನಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.

ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರು ಬಿಜೆಪಿಯಿಂದ ಹೊರಬಂದು ಸ್ವತಂತ್ರವಾಗಿ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಲಿದ್ದಾರಾ? ಇಂತಹದೊಂದು ಗಂಭೀರ ಚರ್ಚೆ ತಮಿಳುನಾಡು ರಾಜಕೀಯ ಪಟಲದಲ್ಲಿ ತಲ್ಲಣ ಸೃಷ್ಟಿಸಿದೆ. ಇದಕ್ಕೆ ಪುಷ್ಟಿ ನೀಡುವಂತೆ ಕೊಯಮತ್ತೂರಿನಾದ್ಯಂತ ಅಣ್ಣಾಮಲೈ ಅವರ ಭಾವಚಿತ್ರವಿರುವ ನಿಗೂಢ ಪೋಸ್ಟರ್‌ಗಳು ರಾರಾಜಿಸುತ್ತಿವೆ.

ಅಣ್ಣಾಮಲೈ ಅವರು ಬಿಜೆಪಿಯ ಸತತ ಎರಡು ಪ್ರಮುಖ ರಾಜ್ಯ ಸಮಿತಿ ಸಭೆಗಳಿಗೆ ಗೈರುಹಾಜರಾಗಿದ್ದಾರೆ. ಇದು ಅವರು ಪಕ್ಷದೊಂದಿಗೆ ಅಂತರ ಕಾಯ್ದುಕೊಳ್ಳುತ್ತಿದ್ದಾರೆ ಎಂಬ ಅನುಮಾನಕ್ಕೆ ಸಾಕ್ಷಿಯಾಗಿದೆ. ಮತ್ತೊಂದೆಡೆ, ಅವರ ಅಭಿಮಾನಿ ಬಳಗವಾದ  (Annamalai Anbu Koottam) ಹೊಸ ಸದಸ್ಯರ ಸೇರ್ಪಡೆ ಮತ್ತು ಪದಾಧಿಕಾರಿಗಳ ನೇಮಕ ಪ್ರಕ್ರಿಯೆ ಆರಂಭಿಸಿದೆ. ಇದು ಹೊಸ ಪಕ್ಷದ ಅಡಿಪಾಯವೇ ಎಂಬ ಚರ್ಚೆ ಶುರುವಾಗಿದೆ.

ಮುಂದಿನ ನಡೆ ಏನು?

ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಅಣ್ಣಾಮಲೈ ಅವರು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗುವ ಸಾಧ್ಯತೆಯಿದೆ. ಅಣ್ಣಾಮಲೈ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಬಿಜೆಪಿ ಹೈಕಮಾಂಡ್ ಯಶಸ್ವಿಯಾಗುತ್ತದೆಯೇ ಅಥವಾ ಅವರು ತಮಿಳುನಾಡಿನಲ್ಲಿ ಹೊಸ ಪ್ರಾದೇಶಿಕ ಶಕ್ತಿಯಾಗಿ ಉದಯಿಸುತ್ತಾರಾ ಎಂಬ ಕುತೂಹಲ ಹೆಚ್ಚಾಗಿದೆ.

Related Articles

Back to top button
error: Content is protected !!