ಖ್ಯಾತ ನಟಿ, ಬಿಗ್ ಬಾಸ್ ಸ್ಪರ್ಧಿ ಶುಭಾ ಪೂಂಜಾ, ಸುಮಂತ್ ಮದುವೆಯಾದ ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನಕ್ಕೆ ವಿದಾಯ!
Views: 67
ಕನ್ನಡ ಕರಾವಳಿ ಸುದ್ದಿ : ಖ್ಯಾತ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿ ಶುಭಾ ಪೂಂಜಾರ ವೈವಾಹಿಕ ಜೀವನದಲ್ಲಿ ಏರುಪೇರಾಗಿದೆ. ದಾಂಪತ್ಯ ಜೀವನಕ್ಕೆ ವಿದಾಯ ಹೇಳಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಮದುವೆಯಾದ ನಾಲ್ಕೇ ವರ್ಷಕ್ಕೆ ನಟಿ ಶುಭಾ ಪೂಂಜಾ ಹಾಗೂ ಪತಿ ಸುಮಂತ್ ದೂರವಾಗುತ್ತಿದ್ದಾರೆ. ಇಬ್ಬರು ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್ ಮೊರೆ ಹೋಗಿದ್ದಾರೆ.
ಕನ್ನಡಪರ ಹೋರಾಟಗಾರ ಹಾಗೂ ಉದ್ಯಮಿಯಾಗಿರುವ ಉಡುಪಿ ಮೂಲದ ಸುಮಂತ್ ಮತ್ತು ನಟಿ ಶುಭಾ ಪೂಂಜಾ ಕೆಲವು ವರ್ಷಗಳ ಕಾಲ ಪರಸ್ಪರ ಪ್ರೀತಿಸುತ್ತಿದ್ದರು. 2022ರ ಜನವರಿ 5 ರಂದು ಇಬ್ಬರೂ ಅತ್ಯಂತ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆಶ್ಚರ್ಯ ಎಂಬಂತೆ ಇವರಿಬ್ಬರು ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂಬ ವಿಚಾರ ಬಹಿರಂಗವಾಗಿದೆ.
ನಾಲ್ಕು ವರ್ಷಗಳ ಸಂಸಾರದಲ್ಲಿ ಬಿರುಕು ಮೂಡಿರುವುದು ಶುಭಾ ಪೂಂಜಾ ಅಭಿಮಾನಿಗಳಿಗೆ ಶಾಕ್ ಕೊಟ್ಟಿದೆ. ವಿಚ್ಛೇದನಕ್ಕೆ ಕಾರಣವನ್ನು ಬಹಿರಂಗಪಡಿಸಲು ಸುಮಂತ್ ನಿರಾಕರಿಸಿದ್ದಾರೆ. ತಮ್ಮ ವೈಯಕ್ತಿಕ ಜೀವನದ ನಿರ್ಧಾರವನ್ನು ಗೌರವಿಸಬೇಕಾಗಿ ಅವರು ಕೋರಿದ್ದಾರೆ. ಈಗಾಗಲೇ ಶುಭಾ ಪೂಂಜಾ ಸೋಶಿಯಲ್ ಮೀಡಿಯಾದಿಂದ ಪತಿ ಜೊತೆಗಿನ ಫೋಟೋ ಡಿಲೀಟ್ ಮಾಡಿದ್ದಾರೆ.






