ಜನಮನ

ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ದಂಪತಿ ನೇಣು ಬಿಗಿದು ಆತ್ಮಹತ್ಯೆ

Views: 1

ಎಂಟು ತಿಂಗಳ ಮಗು ಸೇರಿ ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವೀರಾರ್ಜುನಾ ವಿಜಯ್( 31) ಅವರ ಪತ್ನಿ ಹೇಮಾವತಿ (29) ಮಗಳಾದ 8 ತಿಂಗಳ ಸೃಷ್ಟಿ ಎರಡು ವರ್ಷದ ಮೋಕ್ಷ ಮೃತಪಟ್ಟವರು.

ಇಬ್ಬರು ಮಕ್ಕಳನ್ನು ಕೊಂದು ವಿಜಯ್ ಹಾಗೂ ಹೇಮಾವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೀರಾರ್ಜುನ ವಿಜಯ 6 ವರ್ಷಗಳ ಹಿಂದೆ ಹೇಮಾವತಿ ಅವರನ್ನು ಮದುವೆಯಾಗಿದ್ದರು. ಜುಲೈ 31 ರಂದು ರಾತ್ರಿ ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಮನೆಯಿಂದ ದುರ್ವಾಸನೆ ಬರುತ್ತಿದ್ದರಿಂದ ಸ್ಥಳೀಯರು ಮಾಹಿತಿ ನೀಡಿದರು. ಸ್ಥಳಕ್ಕೆ ಹೋಗಿ ಬಾಗಿಲನ್ನು ಮುರಿದು ನೋಡಿದಾಗ ಮೃತದೇಹಗಳು ಪತ್ತೆಯಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

Related Articles

Back to top button
error: Content is protected !!