ಉಡುಪಿ ಜಿಲ್ಲಾ ಅರ್ಥಶಾಸ್ತ್ರ ಕಾರ್ಯಗಾರ

Views: 0
ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲಾ ಅರ್ಥಶಾಸ್ತ್ರ ಪ್ರಾಂಶುಪಾಲರ ಮತ್ತು ಉಪನ್ಯಾಸಕರ ವೇದಿಕೆಯ ಅರ್ಥಶಾಸ್ತ್ರ ವಿಷಯದ ಪುನಶ್ಚೇತನ ಕಾರ್ಯಗಾರ ಎಕ್ಸಲೆಂಟ್ ಪದವಿಪೂರ್ವ ಕಾಲೇಜು ಸುಣ್ಣಾರಿಯಲ್ಲಿ ಜರುಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆಯನ್ನು ವಹಿಸಿ ,ಮಾತನಾಡಿದ ಸುಜ್ಞಾನ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ ಅವರು, ಮಾತನಾಡಿ, ಅರ್ಥಶಾಸ್ತ್ರ ಪ್ರತಿಯೊಬ್ಬರ ಬದುಕಿನಲ್ಲೂ ಅಗತ್ಯವಾದ ವಿಷಯವಾಗಿದ್ದು, ಅದನ್ನು ಪ್ರತಿಯೊಬ್ಬರೂ ಅರಿಯಬೇಕು ಎಂದರು.
ಸುಜ್ಞಾನ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿಗಳಾದ ಪ್ರತಾಪ್ ಚಂದ್ರ ಶೆಟ್ಟಿ,ಕೋಶಾಧಿಕಾರಿಗಳಾದ ಭರತ್ ಶೆಟ್ಟಿ,ಅರ್ಥಶಾಸ್ತ್ರ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷರಾದ ಕೊಟ್ರಾ ಸ್ವಾಮಿಯವರು ಮಾತುಗಳನ್ನಾಡಿದರು.
ಇದೇ ಸಂದರ್ಭದಲ್ಲಿ ಅರ್ಥಶಾಸ್ತ್ರದಲ್ಲಿ ನೂರಕ್ಕೆ ನೂರು ಅಂಕ ಪಡೆದ ವಿದ್ಯಾರ್ಥಿಗಳನ್ನು, ಮತ್ತು ಶೇಕಡ 100 ಫಲಿತಾಂಶ ದಾಖಲಿಸಿದ ಉಪನ್ಯಾಸಕರನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ನಿವೃತ್ತಿ ಗೊಂಡ ಅರ್ಥಶಾಸ್ತ್ರ ಉಪನ್ಯಾಸಕರನ್ನು ಮತ್ತು ಪಿಎಚ್ ಡಿ ಪದವಿ ಪಡೆದ ಅರ್ಥಶಾಸ್ತ್ರ ಉಪನ್ಯಾಸಕರನ್ನು ಸನ್ಮಾನಿಸಲಾಯಿತು.
ಉಪನ್ಯಾಸಕರಾದ ಶ್ರೀಮತಿ ಸುಗುಣ,ಅನುರಾಧಾ ಶೆಟ್ಟಿ ,ಗಣೇಶ್ ಶೆಟ್ಟಿ ಸಹಕರಿಸಿದರು.
ಗೋಳಿಯಂಗಡಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಶ್ರೀ ದಿನಕರ್ ಶೆಟ್ಟಿ ಸಂಪನ್ಮೂಲ ವ್ಯಕ್ತಿ ಯಾಗಿ ಭಾಗವಹಿಸಿದರು. ವೇದಿಕೆಯ ಜಿಲ್ಲಾ ಅಧ್ಯಕ್ಷರಾದ ನಾಗರಾಜ್ ವೈದ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಅರ್ಥಶಾಸ್ತ್ರ ಉಪನ್ಯಾಸಕ ಶ್ರೀನಿವಾಸ್ ವೈದ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಅರ್ಥಶಾಸ್ತ್ರ ವೇದಿಕೆಯ ಜಿಲ್ಲಾ ಕಾರ್ಯದರ್ಶಿಗಳಾದ ಅಕ್ಷಯ ಹೆಗ್ಡೆ ಮೊಳಹಳ್ಳಿ ವಂದಿಸಿದರು.