ಇತರೆ

ರಾಜ್ಯದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ, ಅರ್ಜಿ ಸಲ್ಲಿಸುವುದು ಹೇಗೆ? 

Views: 94

ಕನ್ನಡ ಕರಾವಳಿ ಸುದ್ದಿ: ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಸಾರಿಗೆ ಸಚಿವರಾದ ಬೈರತಿ ಸುರೇಶ್ ಅವರು ಈ ಯೋಜನೆಯನ್ನು ಘೋಷಿಸಿದ್ದಾರೆ.

ಈಗಾಗಲೇ ಹಣ ಪಾವತಿ ಮಾಡಿ ಬಸ್ ಪಾಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಆ ಹಣವನ್ನು ವಾಪಸ್ ನೀಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಇದುವರೆಗೆ ವಿದ್ಯಾರ್ಥಿನಿಯರಿಗೆ ಮಾತ್ರ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತಿತ್ತು. ಇದೀಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಗಂಡು ಮಕ್ಕಳಿಗೂ ಈ ಸೌಲಭ್ಯವನ್ನು ಕಲ್ಪಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಉಚಿತ ಬಸ್ ಪಾಸ್ ವಿತರಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದ್ದು, ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ವಿದ್ಯಾರ್ಥಿಗಳು ಒಂದೆರಡು ದಿನಗಳಲ್ಲಿ ಕರ್ನಾಟಕ ಒನ್, ಬೆಂಗಳೂರು ಒನ್ ಕಚೇರಿಗಳಲ್ಲಿ ಉಚಿತ ಬಸ್ ಪಾಸ್‌ಗೆ ನಿಗದಿತ ಅರ್ಜಿಯನ್ನು ಸಲ್ಲಿಸಬೇಕು. ಇದನ್ನು ಪರಿಶೀಲನೆ ನಡೆಸಿದ ನಂತರ ಬಸ್ ಪಾಸ್ ಉಚಿತವಾಗಿ ವಿತರಿಸುವ ಪ್ರಕ್ರಿಯೆಯನ್ನು ಆರಂಭಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.

Related Articles

Back to top button
error: Content is protected !!