ಇತರೆ

SSLC,PUC, ಡಿಗ್ರಿ ಫೇಕ್ ಮಾರ್ಕ್ಸ್ ಕಾರ್ಡ್ ತಯಾರಿಸಿ ಮನೆ ಬಾಗಿಲಿಗೆ ಡೆಲಿವರಿ ಮಾಡುತ್ತಿದ್ದ ಆರೋಪಿ ಬಂಧನ

Views: 74

ಕನ್ನಡ ಕರಾವಳಿ ಸುದ್ದಿ: ವಿದ್ಯಾಭ್ಯಾಸ ಪೂರ್ಣಗೊಳ್ಳದಿದ್ದರೂ ಪದವಿ ಕೊಡಿಸುವುದಾಗಿ ನಂಬಿಸಿ, ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ಪತ್ತೆಹಚ್ಚಿದ್ದಾರೆ.

ರಾಜಾರೆಡ್ಡಿ ಬಂಧಿತ ಆರೋಪಿ. ಈ ದಂಧೆಯ ಮತ್ತೊಬ್ಬ ಆರೋಪಿ ಆರ್ಯನ್ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ತನಿಖೆ ವೇಳೆ 50 ಅಧಿಕ ನಕಲಿ ಅಂಕಪಟ್ಟಿಗಳನ್ನು ತಯಾರು ಮಾಡಿಕೊಟ್ಟಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದರು.

ನಗರದ ಕೋರಮಂಗಲದಲ್ಲಿ ಕಚೇರಿ ತೆರೆದು ನಕಲಿ ಅಂಕಪಟ್ಟಿಗಳನ್ನು ಸಿದ್ಧಪಡಿಸುತ್ತಿದ್ದ ಆರೋಪಿ ರಾಜಾರೆಡ್ಡಿ, ಕೋರಮಂಗಲದಲ್ಲಿ ಡಿಜಿಟಲ್ ಡಿಸೈನ್ಸ್ ಎಜುಕೇಷನ್ ಮಿಷನ್ ಹೆಸರಿನಲ್ಲಿ ನಕಲಿ ಕಚೇರಿ ತೆರೆದಿದ್ದ. ವಿವಿಧ ಕಾಲೇಜುಗಳಲ್ಲಿ ಅಡ್ಮಿಷನ್ ಕೊಡಿಸುವುದಾಗಿ ಅಭ್ಯರ್ಥಿಗಳಿಗೆ ಕರೆ ಮಾಡುತ್ತಿದ್ದ. ಫ್ಲಾರೆನ್ಸ್, ಕಲಾನಿಕೇತ್, ಎಂವಿಜೆ ಹಾಗೂ ಟಿಪ್ಪು ಸುಲ್ತಾನ್ ಕಾಲೇಜಗಳು ಸೇರಿದಂತೆ ಹಲವು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಸೀಟು ಕೊಡಿಸುವುದಾಗಿ ಆಮಿಷ ಒಡ್ಡುತ್ತಿದ್ದ ಎಂದು ಪೊಲೀಸರು ವಿವರಿಸಿದರು.

ವಿದ್ಯಾಭ್ಯಾಸ ಮಾಡದಿದ್ದರೂ ನೇರವಾಗಿ ಎಸ್‌ಎಸ್ ಎಲ್‌ಸಿ, ಪಿಯುಸಿ, ಪದವಿ ಪರೀಕ್ಷೆ ಬರೆಯಲು ಮನೆ ಬಾಗಿಲಿಗೆ ಮಾರ್ಕ್ಸ್ ಕಾರ್ಡ್

ವಿದ್ಯಾರ್ಥಿಗಳನ್ನು ಸಂಪರ್ಕಿಸುತ್ತಿದ್ದ ಪ್ರಮುಖ ಆರೋಪಿ ರಾಜಾರೆಡ್ಡಿ, ಮತ್ತೋರ್ವ ಆರೋಪಿ ಆರ್ಯನ್ ಮೂಲಕ ನಕಲಿ ಅಂಕಪಟ್ಟಿ ತಯಾರು ಮಾಡಿಸಿ ಡಿಟಿಡಿಸಿ ಕೊರಿರ್ಯರ್ ಮೂಲಕ ಮಾರ್ಕ್ಸ್ ಕಾರ್ಡ್ ಕಳುಹಿಸುತ್ತಿದ್ದ. ಒಂದು ಮಾರ್ಕ್ಸ್ ಕಾರ್ಡ್‌ಗೆ 30 ರಿಂದ 50 ಸಾವಿರ ರು. ಪಡೆಯುತ್ತಿದ್ದ. ಈವರೆಗೂ 50ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳಿಗೆ ಫೇಕ್ ಮಾರ್ಕ್ಸ್ ಕಾರ್ಡ್ ಮಾರಾಟ ಮಾಡಿ ಲಕ್ಷಾಂತರ ರು. ಅಕ್ರಮವಾಗಿ ಹಣ ಸಂಪಾದನೆ ಮಾಡಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಆರೋಪಿ ರಾಜಾರೆಡ್ಡಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹಣ ಪಡೆದು ನಕಲಿ ಅಂಕಪಟ್ಟಿಗಳನ್ನು ಸಿದ್ಧಪಡಿಸಿ ಮನೆ ಬಾಗಿಲಿಗೆ ಅಂಕಪಟ್ಟಿಗಳನ್ನು ಕೊರಿಯರ್ ಮಾಡುತ್ತಿದ್ದ. ಈ ದಂಧೆ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿ ಲಭ್ಯವಾಗಿತ್ತು. ಮಾಹಿತಿ ಮೇರೆಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಸಿಸಿಬಿ ಪೊಲೀಸರು ತನಿಖೆ ನಡೆಸಿ, ಆರೋಪಿ ರಾಜಾರೆಡ್ಡಿಯನ್ನು ಬಂಧಿಸಿದ್ದಾರೆ.

Related Articles

Back to top button
error: Content is protected !!