ಶಿಕ್ಷಣ
ಕೋಟ ಗೀತಾನಂದ ಫೌಂಡೇಶನ್‌ನಿಂದ ಕಾಳಾವರ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ
Views: 79
ಕನ್ನಡ ಕರಾವಳಿ ಸುದ್ದಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಳಾವರದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಕೋಟ ಇವರ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಬುಕ್ ವಿತರಣೆ ಕಾರ್ಯಕ್ರಮ ಜೂನ್ 13 ರಂದು ನಡೆಯಿತು.
ಕೋಟ ಗೀತಾನಂದ ಫೌಂಡೇಶನ್ ಇದರ ಪ್ರವರ್ತಕರಾದ ಶ್ರೀ ಆನಂದ ಸಿ. ಕುಂದರ್ ಅವರು ಈ ಸಾಲಿನಲ್ಲಿ ವಿವಿಧ ಶಾಲೆಗಳ ಸುಮಾರು 6,000 ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸಿರುತ್ತಾರೆ. ಆನಂದ ಸಿ.ಕುಂದರ್ ಅವರ ಆಪ್ತರೂ, ಫೌಂಡೇಶನ್ ನ ಸದಸ್ಯರೂ ಆದ ನಿವೃತ್ತ ಮುಖ್ಯ ಶಿಕ್ಷಕ ಕಾವ್ರಾಡಿ ಬಾಲಚಂದ್ರ ಶೆಟ್ಟಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿದರು. ಸುಮಾರು 40,000/- ರೂಪಾಯಿ ಮೌಲ್ಯದ ಪುಸ್ತಕಗಳನ್ನು ವಿತರಿಸಲಾಯಿತು.
ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷೆ ದೀಪಾ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಶಿಕ್ಷಣ ಒದಗಿಸುವ ಸಲುವಾಗಿ ಕಂಪ್ಯೂಟರ್ ಲ್ಯಾಬ್ ಅನ್ನು ಸ್ಥಾಪಿಸಿರುವ ಕಾಪು ಮುದ್ದಣ್ಣ ಶೆಟ್ಟಿ, ಟ್ರಸ್ಟ್ ನ ಕಾರ್ಯದರ್ಶಿ ಕಾಳಾವರ ಕಿಶೋರ್ ಕುಮಾರ್ ಶೆಟ್ಟಿ ಮೊಳಹಳ್ಳಿ, ಕಾಳಾವರ ಕಾಳಿಂಗ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರಾದ ಶಾನಾಡಿ ಚಂದ್ರಶೇಖರ ಹೆಗ್ಡೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಭರತ್ ಕುಮಾರ್ ಶೆಟ್ಟಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಜಯಪ್ರಕಾಶ್ ಶೆಟ್ಟಿ, ಕಾಳಾವರ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಮುಸರತ್ ಜಹಾನ್ ಅಕ್ಟರ್ ಎಂ. ಮೊದಲಾದವರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ವಸಂತಿ ಎಚ್. ಸ್ವಾಗತಿಸಿದರು. ಸಹ ಶಿಕ್ಷಕ ಉದಯ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಶೆಟ್ಟಿ ವಂದಿಸಿದರು. ಶಿಕ್ಷಕಿಯರಾದ ಪ್ರೇಮಾ ಕೆ, ನಾಗರತ್ನ ಎಚ್. ಶೈಲಜ, ಶ್ರುತಿ, ರಜನಿ, ಭಾರತಿ ಕಲ್ಕೂರ, ಸುಮಿತ್ರಾ, ಪೂರ್ಣಿಮಾ, ಹಾಗೂ ಯುಕೆಜಿ ಶಿಕ್ಷಕಿ ಶ್ರುತಿ ಸಹಕರಿಸಿದರು.








