ಈಶ್ವರಪ್ಪ, ಯತ್ನಾಳ್, ಎಸ್.ಟಿ.ಸೋಮಶೇಖರ್, ಹೆಬ್ಬಾರ್ ಮರಳಿ ಬಿಜೆಪಿಗೆ?
Views: 140
ಕನ್ನಡ ಕರಾವಳಿ ಸುದ್ದಿ: ಆಡಳಿತ ಪಕ್ಷ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ನಂತರ ಈಗ ಪ್ರತಿಪಕ್ಷದಲ್ಲೂ ಬದಲಾವಣೆಯ ಗಾಳಿ ಬೀಸುತ್ತಿದೆ. ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನಲ್ಲಿನ ನಾಯಕತ್ವ ಬದಲಾದಂತೆ ಬಿಜೆಪಿಯಲ್ಲಿನ ರಾಜ್ಯಾಧ್ಯಕ್ಷರ ಆಯ್ಕೆ ಹಾಗೂ ಉಚ್ಚಾಟನೆಗೊಂಡವರ ಮೂರು ಸೇರ್ಪಡೆಗೆ ವೇದಿಕೆ ಸಜ್ಜುಗೊಂಡಿದೆ.
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಬಸನಗೌಡ ಪಾಟೀಲ್ ಯತ್ನಾಳ್,ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ. ಸೋಮಶೇಖರ್ ಮತ್ತು ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಂ ಹೆಬ್ಬಾರ್ ಅವರು ಕಾಂಗ್ರೆಸ್ ನಾಯಕರೊಂದಿಗೆ ಗುರುತಿಸಿಕೊಂಡು, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಕಾರಣಕ್ಕಾಗಿ ಬಿಜೆಪಿಯಿಂದ ಉಚ್ಚಾಟನೆಗೊಂಡಿದ್ದಾರೆ ಶಿವರಾಮ್ ಹೆಬ್ಬಾರ್ ಹಾಗೂ ಎಸ್.ಟಿ.ಸೋಮಶೇಖರ್‌ಗೆ ಮತ್ತೆ ಪಕ್ಷದ ಬಾಗಿಲುಗಳು ತೆರೆಯುವ ಸಾಧ್ಯತೆಯಿದೆ ಎಂದು ವಿಶ್ಲೇಷಿಸಲಾಗಿದೆ.
ಇದಕ್ಕೆ ಪೂರಕವಾಗಿ ಬಿಜೆಪಿ ಕರ್ನಾಟಕ ರಾಜ್ಯ ಉಸ್ತುವಾರಿ ರಾಧಾಮೋಹನದಾಸ್ ಅಗರ್ವಾಲ್, ಹಾಲಿ ರಾಜ್ಯಾಧ್ಯಕ್ಷರ ಕಾರ್ಯಕ್ಷಮತೆ ಸೇರಿದಂತೆ ವಿವಿಧ ಅಂಶಗಳನ್ನು ರಾಷ್ಟ್ರೀಯ ನಾಯಕತ್ವ ಪರಿಶೀಲಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದಿರುವುದು ಚರ್ಚೆ ಹುಟ್ಟುಹಾಕಿದೆ.
ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅಧಿಕಾರ ವಹಿಸಿಕೊಂಡು ನವೆಂಬರ್‌ಗೆ ಮೂರು ವರ್ಷಗಳಾಗುತ್ತಿದ್ದರೂ, ಅಧಿಕಾರ ವಹಿಸಿಕೊಂಡಲ್ಲಿಂದ ಪಕ್ಷದೊಳಗೆ ಅಪಸ್ವರ ಕೇಳಿ ಬರುತ್ತಲೇ ಇದೆ. ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ಶಾಸಕ ಬಸನಗೌಡ ಯತ್ನಾಳ್ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದಲ್ಲದೆ, ಬದಲಾವಣೆಗೂ ಆಗ್ರಹಿಸಿದ್ದರು. ನಂತರ ನಡೆದ ಬೆಳವಣಿಗೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್‌ರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಇದಾರ ನಂತರ ರಮೇಶ್ ಜಾರಕಿಹೊಳಿ ಸೇರಿದಂತೆ ಇತರರು ಕೂಡ ನಾಯಕತ್ವದ ಬಗ್ಗೆ ತಕರಾರು ಎತ್ತಿದ್ದರೂ, ಕೇಂದ್ರದ ವರಿಷ್ಟರು ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ. ಕಳೆದ ತಿಂಗಳಲ್ಲಿ ಬಿಜೆಪಿಯ ರಾಷ್ಟ್ರಾಧ್ಯಕ್ಷರ ಬದಲಾವಣೆ ಅದರ ನಂತರ, ಕರ್ನಾಟಕದಲ್ಲಿಯೂ ಕೆಲ ಬದಲಾಣೆಗಳಾಗಬಹುದು ಎನ್ನಲಾಗಿತ್ತು. ಹೀಗಾಗಿ ರಾಜ್ಯ ರಾಜಕಾರಣದಲ್ಲಿನ ಸಮೀಕರಣ ಬಿಜೆಪಿ ಯಲ್ಲಿನ ರಾಜ್ಯಾಧ್ಯಕ್ಷರ ಬದಲಾವಣೆ ಸೇರಿದಂತೆ ಪಕ್ಷದಿಂದ ಉಚ್ಚಾಟನೆ ಗೊಂಡ ನಾಯಕರ ಮರುಸೇರ್ಪಡೆಯ ಸಾಧ್ಯತೆ ಶೀಘ್ರದಲ್ಲಿ ನಡೆಯಲಿರುವ ಸುಳಿವು ಸಿಕ್ಕಿದೆ.
ಮಂಗಳೂರಲ್ಲಿ ಮಾತನಾಡಿರುವ ಬಿಜೆಪಿ ಕರ್ನಾಟಕ ರಾಜ್ಯ ಉಸ್ತುವಾರಿ ರಾಧಾಮೋ ಹನದಾಸ್ ಆಗರ್ವಾಲ್, ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕುರಿತು ಅಂತಿಮ ತೀರ್ಮಾನವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರೇ ಕೈಗೊಳ್ಳಲಿದ್ದು, ಪಕ್ಷದಿಂದ ಉಚ್ಚಾಟನೆಗೊಂಡ ಕಾರ್ಯಕ್ರಮತೆ ಸೇರಿದಂತೆ ವಿವಿಧ ಅಂಶಗಳನ್ನು ರಾಷ್ಟ್ರೀಯ ನಾಯಕತ್ವ ಪರಿಶೀಲಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದಿದ್ದಾರೆ.






