ಸಾಂಸ್ಕೃತಿಕ

ಕಿರುತೆರೆಯ ಜನಪ್ರಿಯ ನಟಿ ನಿಗೂಢ ಸಾವು! ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವ ಪತ್ತೆ 

Views: 154

ಕನ್ನಡ ಕರಾವಳಿ ಸುದ್ದಿ: ಹಿಂದಿ ಕಿರುತೆರೆಯ ಉದಯೋನ್ಮುಖ ಹಾಗೂ ಜನಪ್ರಿಯ ನಟಿ ಸಂಚಿತಾ ಉಗಲೆ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಸಂಭವಿಸಿದೆ.

ಭಾನುವಾರ ಸಂಜೆ ಅವರ ಸಹೋದರಿ ಅಂಜಲಿ ಅವರು ವೈಯಕ್ತಿಕ ಕೆಲಸದ ನಿಮಿತ್ತ ಮನೆಯಿಂದ ಹೊರಗೆ ಹೋಗಿದ್ದರು. ಈ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇಲ್ಲದಿದ್ದನ್ನು ಗಮನಿಸಿದ ನಟಿ ಸಂಚಿತಾ, ತಮ್ಮ ಕೋಣೆಯ ಸೀಲಿಂಗ್‌ ಫ್ಯಾನ್‌ಗೆ ಸೀರೆಯಿಂದ ನೇಣು ಬಿಗಿದುಕೊಂಡು ಕೊನೆಯುಸಿರೆಳೆದಿದ್ದಾರೆ.

ಸಹೋದರಿ ಮನೆಗೆ ಮರಳಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ತಕ್ಷಣವೇ ಅರೆಪ್ರಜ್ಞಾವಸ್ಥೆಯಲ್ಲಿದ್ದ ನಟಿಯನ್ನು ಸ್ಥಳೀಯ ತುಲಿಂಜ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಈ ಸುದ್ದಿ ಇಡೀ ಹಿಂದಿ ಟಿವಿ ಉದ್ಯಮಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ.

ಪೊಲೀಸ್ ತನಿಖೆ ಚುರುಕು ಸಂಚಿತಾ ಅವರ ಈ ತೀವ್ರ ನಿರ್ಧಾರಕ್ಕೆ ನಿಖರವಾದ ಕಾರಣವೇನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಯಾವುದೇ ಡೆತ್ ನೋಟ್ ಕೂಡ ಪತ್ತೆಯಾಗಿಲ್ಲ ಎನ್ನಲಾಗಿದೆ. ಸದ್ಯ ಸ್ಥಳೀಯ ಅಚೋಲೆ ಪೊಲೀಸ್ ಠಾಣೆಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಅಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ನಟಿಯ ಆಪ್ತರು ಹಾಗೂ ಕುಟುಂಬಸ್ಥರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ.

Related Articles

Back to top button
error: Content is protected !!