ಜನಮನ
ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಅಂಗಾಂಗ ದಾನ ಮಾಡಿ: ಮನೆಯವರು ಮಾನವೀಯತೆ ಮೆರೆದಿದ್ದಾರೆ

Views: 0
ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡು ಉಡುಪಿಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಉದ್ಯಾವರ ಬೋಳಾರ ಗುಡ್ಡೆ ನಿವಾಸಿ ಪ್ರಶಾಂತ್ (37) ಎಂಬುವವರು ಅಂಗಾಂಗಗಳನ್ನು ದಾನ ಮಾಡಿ ಅವರ ಮನೆಯವರು ಮಾನವೀಯತೆ ಮೆರೆದಿದ್ದಾರೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪ್ರಶಾಂತ್ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಹತ್ತಿರ ರಸ್ತೆ ದಾಟುತ್ತಿದ್ದ ವೇಳೆ ಟ್ರಕ್ ಡಿಕ್ಕಿ ಹೊಡೆದು ಪ್ರಜ್ಞಾಹೀನ ಸ್ಥಿತಿಯಲ್ಲಿ ರಸ್ತೆ ಬದಿಯಲ್ಲಿ ಬಿದ್ದಿದ್ದರು.
ತಲೆಗೆ ತೀವ್ರ ಪೆಟ್ಟು ಬಿದ್ದು ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯರ ಸೂಚನೆಯಂತೆ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಚಿಕಿತ್ಸೆಗೆ ಸ್ಪಂದಿಸದ ಅವರು ಗುರುವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ವೇಳೆ ಮಣಿಪಾಲ ವೈದ್ಯರು ಅಂಗಾಂಗ ದಾನದ ಬಗ್ಗೆ ಮಾಹಿತಿ ನೀಡಿದರು.
ಮೃತ ಸಂಬಂಧಿಗಳು ಅಂಗಾಂಗ ದಾನ ಮಾಡುವ ಬಗ್ಗೆ ಒಪ್ಪಿಗೆ ನೀಡುವ ಮೂಲಕ ಇತರ ರೋಗಿಗಳ ಜೀವ ಉಳಿಸಲು ವೈದ್ಯರು ಸಲಹೆ ನೀಡಿದ್ದರು.
.






