ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!
Views: 158
ಕನ್ನಡ ಕರಾವಳಿ ಸುದ್ದಿ: ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ಸಂಜೆ ಸೋಮೇಶ್ವರ ಬಸ್ಸು ತಂಗುದಾಣದ ಬಳಿ ನಡೆದಿದೆ.
ಸೋಮೇಶ್ವರ ಬಸ್ಸು ತಂಗುದಾಣದ ಬಳಿಯ ನಿವಾಸಿ ಸಮನ್ವಿ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.
ಸೊಮೇಶ್ವರದ ಖಾಸಗಿ ವಿದ್ಯಾ ಸಂಸ್ಥೆಯಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಸಮನ್ವಿ ಭರತ ನಾಟ್ಯ ಕಲಾವಿದೆಯಾಗಿದ್ದಳು. ರವಿವಾರ ಸಂಜೆ ಸ್ನಾನಕ್ಕೆಂದು ಕೋಣೆಗೆ ಸೇರಿದ ಸಮನ್ವಿ ಎಷ್ಟು ಹೊತ್ತಾದರೂ ಹೊರ ಬಾರದೆ ಇದ್ದಾಗ ಮನೆ ಮಂದಿ ಮನೆಯ ಬಾಗಿಲು ಮುರಿದು ಒಳ ನುಗ್ಗಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಸಮನ್ವಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಘಟನೆ ಬಗ್ಗೆ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಸ್ಥಳಕ್ಕೆ ಧಾವಿಸಿ, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳಾಂತರಿಸಿ, ಅಸ್ವಾಭಾವಿಕ (ಯುಡಿಆರ್) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳದಿಂದ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗದ ಕಾರಣ ಆತ್ಮಹತ್ಯೆಯ ಹಿಂದಿನ ನಿಖರವಾದ ಉದ್ದೇಶ ತಿಳಿದು ಬಂದಿಲ್ಲ ಎಂದು ತನಿಖಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉಳ್ಳಾಲ ಠಾಣಾ ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.






