ಇತರೆ

ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ SIT ತಂಡ :ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ

Views: 64

ಕನ್ನಡ ಕರಾವಳಿ ಸುದ್ದಿ: ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ SIT ತಂಡದ SP ಸೈಮನ್ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಅಧಿಕಾರಿಗಳು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಹಾಗೂ ಎಸ್‌ ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾ‌ರ್ ದಯಾಮ ಅವರನ್ನು ಬೆಳ್ತಂಗಡಿ ಎಸ್‌ ಐಟಿ ಕಚೇರಿಯಿಂದ ಎಸ್ಪಿ ಸಿ.ಎ ಸೈಮನ್, ಇನ್ಸ್‌ಪೆಕ್ಟ‌ರ್ ಕುಸುಮಾಧರ್, ಸಿಬ್ಬಂದಿ ಪಿಸಿ ಮಂಜುನಾಥ್ ಭೇಟಿ ಮಾಡಲು ಚಿಕ್ಕಮಗಳೂರು ಕಡೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಕಾರು ದಿಬ್ಬಕ್ಕೆ ಗುದ್ದಿ ಪಲ್ಟಿಯಾಗಿದ್ದು ಈ ಸಂಬಂಧ ಬೆಳ್ತಂಗಡಿ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿಶೇಷ ತನಿಖಾ ತಂಡದ ಅಧಿಕಾರಿಗಳು ಇದ್ದ ಇನ್ನೊವಾ ಕಾರು ಬೆಳ್ತಂಗಡಿ ತಾಲ್ಲೂಕಿನ ಚಾರ್ಮಾಡಿಯಲ್ಲಿ ಪಲ್ಟಿಯಾದ ಪರಿಣಾಮ ಚಾಲಕ ಸೇರಿದಂತೆ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಎಸ್‌ಐಟಿ ತಂಡದ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾ‌ರ್ ದಯಾಮ ಅವರು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದು, ಅವರನ್ನು ಭೇಟಿ ಮಾಡಿ, ಮಾಹಿತಿ ನೀಡಲು ಈ ಇಬ್ಬರು ಅಧಿಕಾರಿಗಳು ಇನ್ನೊವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.

ಅಲ್ಲಿಂದ ಬೆಂಗಳೂರಿಗೆ ತೆರಳಿ ಎಸ್‌ಐಟಿ ಮುಖ್ಯಸ್ಥ ಪ್ರಣವ್‌ ಮೊಹಾಂತಿ ಅವರನ್ನು ಭೇಟಿಯಾಗುವವರಿದ್ದರು ಎಂದು ತಿಳಿದುಬಂದಿದೆ.

 

Related Articles

Back to top button
error: Content is protected !!