ಜನಮನ

ಕರಾವಳಿ ಸೇರಿದಂತೆ ಹಲವೆಡೆ 24 ಗಂಟೆಗಳಲ್ಲಿ ಬಿರುಗಾಳಿ ಸಹಿತ ಮಳೆ ನಿರೀಕ್ಷೆ

Views: 172

ಕನ್ನಡ ಕರಾವಳಿ ಸುದ್ದಿ: ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 24 ರಿಂದ 48 ಗಂಟೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲ ಕಡೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ, ಕರಾವಳಿ ಮತ್ತು ಮಲೆನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮುಂದಿನ 24 ರಿಂದ 48 ಗಂಟೆಗಳಲ್ಲಿ ನಿರಂತರ ಮಳೆಯಾಗುವ ಸಾಧ್ಯತೆಯಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಮತ್ತು ಸಂಚಾರ ದಟ್ಟಣೆ ಉಂಟಾಗುವ ಮುನ್ನೆಚ್ಚರಿಕೆ ನೀಡಲಾಗಿದೆ.

 

 

 

 

Related Articles

Back to top button
error: Content is protected !!