ಸಾಂಸ್ಕೃತಿಕ

ಲಕ್ಷ್ಮೀ ನಿವಾಸ ಧಾರಾವಾಹಿ ನಟಿ ರೂಪಿಕಾ ಬಹುಕಾಲದ ಗೆಳೆಯನೊಂದಿಗೆ ವೈವಾಹಿಕ ಜೀವನಕ್ಕೆ ಸಜ್ಜು

Views: 46

ಕನ್ನಡ ಕರಾವಳಿ ಸುದ್ದಿ : ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ಸದ್ಯ ಸಕ್ರಿಯರಾಗಿರುವ ನಟಿ ರೂಪಿಕಾ ತಮ್ಮ ಬಹುಕಾಲದ ಗೆಳೆಯ ಅಂಕಿತ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಇತ್ತೀಚೆಗೆ ನಿಶ್ಚಿತಾರ್ಥ ಅದ್ದೂರಿಯಾಗಿ ನೆರವೇರಿದ್ದು, ಆಗಸ್ಟ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ವಿವಾಹ ನಡೆಯಲಿದೆ.

ತಮ್ಮ ಬಹುಕಾಲದ ಗೆಳೆಯ ಅಂಕಿತ್ ಅವರೊಂದಿಗೆ ನಟಿ ರೂಪಿಕಾ ಹಸೆಮಣೆ ಏರುತ್ತಿದ್ದು, ಇತ್ತೀಚೆಗಷ್ಟೇ ಹಿರಿಯರು ಹಾಗೂ ಆಪ್ತರ ಸಮ್ಮುಖದಲ್ಲಿ ಇವರ ನಿಶ್ಚಿತಾರ್ಥ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಮದುವೆ ಸುದ್ದಿ ಹೊರಬೀಳುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಈ ಹೊಸ ಜೋಡಿಗೆ ಶುಭ ಹಾರೈಸುತ್ತಿದ್ದಾರೆ.

ಅಂಕಿತ್ ಅವರು ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 5 ವರ್ಷಗಳಿಂದ ಕೆನಡಾದಲ್ಲಿ ನೆಲೆಸಿದ್ದಾರೆ. ಸದ್ಯ ಕೆನಡಾದ ‘ಇನ್ವೆಸ್ಕೋ ಸಂಸ್ಥೆಯಲ್ಲಿ ಟ್ಯಾಕ್ಸ್ ಸ್ಪೆಷಲಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇನ್ನು ಮುಂಬರುವ ಆಗಸ್ಟ್ ತಿಂಗಳಿನಲ್ಲಿ ಬೆಂಗಳೂರಿನಲ್ಲೇ ಇವರ ವಿವಾಹ ನಡೆಯಲಿದ್ದು, ಈ ಮದುವೆ ಸಮಾರಂಭಕ್ಕೆ ರೂಪಿಕಾ ಅವರ ಆಪ್ತರು, ಚಿತ್ರರಂಗದ ಸ್ನೇಹಿತರು ಹಾಗೂ ರಾಜಕೀಯ ರಂಗದ ಪ್ರಮುಖ ಗಣ್ಯರು ಸಾಕ್ಷಿಯಾಗಲಿದ್ದಾರೆ ಎಂದು ಹೇಳಲಾಗಿದೆ.

Related Articles

Back to top button
error: Content is protected !!