ಜನಮನ
ಎರಡನೇ ತರಗತಿ ವಿದ್ಯಾರ್ಥಿ ಮೇಲೆ ಅತ್ಯಾಚಾರ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

Views: 0
ಬೆಂಗಳೂರಿನ ಪ್ರತಿಷ್ಠಿತ ಶಾಲೆಯೊಂದರಲ್ಲಿ ಎರಡನೇ ತರಗತಿಯ 10 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಶಾಲೆಯ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್ (65) ಅವರನ್ನು ಬಂಧಿಸಲಾಗಿದೆ.
ಶಾಲೆಯ ತರಗತಿ ಕೊಠಡಿಯಲ್ಲಿ ಒಂಟಿಯಾಗಿ ಕುಳಿತಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪದಲ್ಲಿ ದೂರು ಆಧರಿಸಿ ಪೊಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಅತ್ಯಾಚಾರದ ಬಳಿಕ ಬಾಲಕಿಗೆ ಕೇಕ್ ನ್ನು ಕೊಟ್ಟು ಮನೆಗೆ ಕಳುಹಿಸಿದ್ದರು. ಮನೆಗೆ ಹೋಗಿದ್ದ ಬಾಲಕಿ ತೀವ್ರ ನೋವಿನಿಂದ ಅಸ್ವಸ್ಥಳಾಗಿದ್ದನ್ನು ಗಮನಿಸಿದ ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ತಪಾಸಣೆ ನಡೆಸಿದ ವೈದ್ಯರು ಅತ್ಯಾಚಾರವಾಗಿರುವುದಾಗಿ ತಿಳಿಸಿದರು. ಬಾಲಕಿ ಹೇಳಿಕೆ ಆಧರಸಿ ಠಾಣೆಗೆ ದೂರು ನೀಡಲಾಗಿದೆ.
ಪ್ರಕರಣ ದಾಖಲಾಗುತ್ತಿದ್ದಂತೆ ಪ್ರಾಂಶುಪಾಲರನ್ನು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ.






