ಇತರೆ

ಕುಂದಾಪುರ: ಹಂಗಳೂರಿನಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಸ್ಕೂಟರ್ ಡಿಕ್ಕಿ, ಸವಾರ ಸಾವು 

Views: 147

ಕನ್ನಡ ಕರಾವಳಿ ಸುದ್ದಿ: ಕುಂದಾಪುರ  ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಹಂಗಳೂರು ಗ್ರಾಮದ ಅಲಂಕಾರ್ ಬಾರ್ ಎದುರು ಸಂಭವಿಸಿದೆ.

ಜೂನ್ 18ರಂದು ಸಂಜೆ ಸುಮಾರು 7:15 ಗಂಟೆಗೆ ಅವದೇಶ ಎಂಬವರು KA-20-HF-3019 ಸಂಖ್ಯೆಯ ಸ್ಕೂಟರನ್ನು ಕೋಟೇಶ್ವರ ಕಡೆಯಿಂದ ಕುಂದಾಪುರ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ, ಅಲಂಕಾರ್ ಬಾರ್‌ನಿಂದ ರಾಷ್ಟ್ರೀಯ ಹೆದ್ದಾರಿಯ ಪೂರ್ವ ಭಾಗದ ಕಡೆಗೆ ರಸ್ತೆ ದಾಟುತ್ತಿದ್ದ ಯಲ್ಲಪ್ಪ ಅವರಿಗೆ ಡಿಕ್ಕಿ ಹೊಡೆದಿದ್ದಾರೆ.

ಡಿಕ್ಕಿಯ ತೀವ್ರತೆಗೆ ಸ್ಕೂಟರ್ ಸಮೇತ ರಸ್ತೆಗೆ ಬಿದ್ದ ಅವದೇಶ ಅವರ ತಲೆ ಹಾಗೂ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿ ಪ್ರಜ್ಞೆ ತಪ್ಪಿದ್ದಾರೆ. ಯಲ್ಲಪ್ಪ ಅವರಿಗೆ ಕೈ-ಕಾಲುಗಳಿಗೆ ತರಚಿದ ಗಾಯ ಹಾಗೂ ಒಳಪೆಟ್ಟಾಗಿದ್ದು, ಇಬ್ಬರನ್ನೂ ಚಿಕಿತ್ಸೆಗಾಗಿ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.

ಆಸ್ಪತ್ರೆಯಲ್ಲಿ ವೈದ್ಯರು ಅವದೇಶ ಅವರನ್ನು ಪರೀಕ್ಷಿಸಿ  ಮೃತಪಟ್ಟಿರುವುದಾಗಿ ದೃಢಪಡಿಸಿದರು.

ಈ ಸಂಬಂಧ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!