ಧಾರ್ಮಿಕ
ಅನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಸಿ.ಟಿ. ರವಿ ಭೇಟಿ ನೀಡಿ ವಿಶೇಷ ಪೂಜೆ
Views: 34
ಕನ್ನಡ ಕರಾವಳಿ ಸುದ್ದಿ: ಅನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ವಿಧಾನಪರಿಷತ್ ಸದಸ್ಯರು, ಮಾಜಿ ಸಚಿವರೂ ಆದ ಸಿ.ಟಿ. ರವಿ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಶ್ರೀಯುತರನ್ನು ಆಡಳಿತ ಮಂಡಳಿಯ ಪರವಾಗಿ ಆಡಳಿತ ಧರ್ಮದರ್ಶಿಗಳಾದ ಕೆ. ಶ್ರೀ ರಮಣ ಉಪಾಧ್ಯಾಯರು ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಿದರು. ಪರ್ಯಾಯ ಅರ್ಚಕರಾದ ಕೆ. ಸೂರ್ಯನಾರಾಯಣ ಉಪಾಧ್ಯಾಯರು ಶ್ರೀದೇವರ ಪ್ರಸಾದವನ್ನು ನೀಡಿ ಆಶೀರ್ವದಿಸಿದರು. ಧರ್ಮದರ್ಶಿಗಳಾದ ಕೆ. ಪದ್ಮನಾಭ ಉಪಾಧ್ಯಾಯರು, ಆಡಳಿತ ಹಾಗೂ ಅರ್ಚಕ ಮಂಡಳಿಯ ಸದಸ್ಯರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಿ.ಟಿ. ರವಿ ಅವರು ದೇವಸ್ಥಾನದ ಪರಿಸರ, ಸ್ವಚ್ಛತೆ ಹಾಗೂ ಅಭಿವೃದ್ಧಿಯನ್ನು ಕಂಡು ಶ್ಲಾಘಿಸಿದರು.






