ರಾಜಕೀಯ
ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ: ಪ್ರಮೋದ್ ಮಧ್ವರಾಜ್

Views: 0
ಎಲ್ಲಾ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ದಿನೇ ದಿನೇ ಹೆಚ್ಚುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿ ನಾಯಕ ಪ್ರಮೋದ್ ಮದ್ವರಾಜ್ ಬಿಜೆಪಿ ಟಿಕೇಟಿಗೆ ನಾನು ಪ್ರಬಲ ಆಕಾಂಕ್ಷಿ ಎನ್ನುವ ಮಾತುಗಳನ್ನು ಆಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಉಡುಪಿ -ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿಯಲ್ಲಿ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಹೇಳಿದ್ದಾರೆ.
ನಾನು ಬಿಜೆಪಿ ತ್ಯಜಿಸುವ ಬಗ್ಗೆ ಕೆಲವರು ಮಾತನಾಡುತ್ತಿದ್ದಾರೆ. ಆದರೆ ಮುಂದೊಂದು ದಿನ ರಾಜಕೀಯ ನಿವೃತ್ತಿ ಆಗುತ್ತೇನೆ ಹೊರತು ದೇಹಾಂತ್ಯ ಆಗುವವರೆಗೂ ನಾನು ಬಿಜೆಪಿ ಬಿಡುವುದಿಲ್ಲ. ನಾನು ಕಮಲದ ಕಾರ್ಯಕರ್ತನಾಗಿಯೇ ಇರುತ್ತೇನೆ ಎಂದರು.
ಭರವಸೆ ಕೊಟ್ಟರೆ ಸಂತೋಷದಿಂದ ಎಲ್ಲರ ಆಶೀರ್ವಾದ ಪಡೆದು ಸ್ಪರ್ಧೆ ಮಾಡುತ್ತೇನೆ. ಬೇರೆಯವರಿಗೆ ಅವಕಾಶ ಕೊಟ್ಟರೆ ಪ್ರಾಮಾಣಿಕನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.






