ಯುವಜನ

ಕೆಎಸ್‌ಆರ್‌ಟಿಸಿ ಬಸ್ ಹರಿದು ಬೈಕ್ ನಲ್ಲಿದ್ದ ಮೂವರು ಯುವಕರು ದುರ್ಮರಣ 

Views: 48

ಕನ್ನಡ ಕರಾವಳಿ ಸುದ್ದಿ: ಕೆಎಸ್‌ಆರ್‌ಟಿಸಿ ಬಸ್ ಹರಿದು ಬೈಕ್ ನಲ್ಲಿ ಚಲಿಸುತ್ತಿದ್ದ ಮೂವರು ಯುವಕರು ದುರ್ಮರಣ ಹೊಂದಿದ್ದಾರೆ.

ಈ ಘಟನೆಯು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದಲ್ಲಿ ನಡೆದಿದೆ. ದೇವರಾಜ (19), ಲಕ್ಷ್ಮಿಕಾಂತ (20) ಮತ್ತು ಪ್ರಕಾಶ (23) ಮೃತ ದುರ್ದೈವಿಗಳು.

ಮೂವರು ಯುವಕರು ಸಂಬಂಧಿಗಳಾಗಿದ್ದು ಬೊಮ್ಮನಳ್ಳಿಯಲ್ಲಿ ಸಂಬಂಧಿಕರೊಬ್ಬರ ಮನೆಯಲ್ಲಿ ಪೂಜೆ ಮುಗಿಸಿಕೊಂಡು ಬರುತ್ತಿರುವಾಗ ಯಮನ ರೂಪದಲ್ಲಿ ಬಂದ ಕೆಎಸ್‌ಆರ್ಟಿಸಿ ಬಸ್‌ ಅವರ ಮೈಮೇಲೆ ಹರಿದು ಹೋಗಿದೆ. ಪರಿಣಾಮವಾಗಿ ಮೂವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಈ ದುರಂತ ತಿಳಿದ ಬಳಿಕ ಮನೆಯವರು ತೀವ್ರ ಆಘಾತಕ್ಕೆ ಒಳಗಾಗಿದ್ದು ಮಕ್ಕಳನ್ನು ಕಳೆದುಕೊಂಡ ದುಃಖದಲ್ಲಿ ಅವರ ಮನಸ್ಸು ಕುಗ್ಗಿ ಹೋಗಿದೆ. ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Related Articles

Back to top button
error: Content is protected !!