ರಾಜಕೀಯ

ಕೆಲವೊಮ್ಮೆ ಬಿಜೆಪಿ ಜೊತೆ ಹೋರಾಟ ಮಾಡಬೇಕಾಗುತ್ತದೆ ಹಾಗೆಂದ ಮಾತ್ರಕ್ಕೆ ಯಾರ ಬಳಿಯೂ ಭಿಕ್ಷೆ ಬೇಡುವ ಪರಿಸ್ಥಿತಿ ಇಲ್ಲ: ಕುಮಾರಸ್ವಾಮಿ

Views: 0

ನಾನು ಹಿಟ್ ಅಂಡ್ ರನ್ ಮಾಡುವ ವ್ಯಕ್ತಿಯಲ್ಲ ನಡೆದಿರುವ ವಿಚಾರವನ್ನು ನೇರವಾಗಿ ಹೇಳುವವನು. ಸಿದ್ದರಾಮಯ್ಯನವರೇ ನಿಮ್ಮಂತೆ ನಾನು ಮುಖ್ಯಮಂತ್ರಿ ಆಗಿದ್ದಾಗ ನನ್ನ ಸಹಿಯನ್ನು ಮಾರಾಟಕ್ಕೆ ಇಟ್ಟಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಎಚ್ ಡಿ ಕುಮಾರಸ್ವಾಮಿ ಅವರು ಮಾತನಾಡಿ, ಬಿಜೆಪಿ ಸರ್ಕಾರ ಮೇಲೆ 40% ಆರೋಪ ಮಾಡಿದಿರಿ ಆ ಆರೋಪದ ಕಥೆ ಏನಾಯ್ತು? ಒಂದು ದಾಖಲೆಯನ್ನಾದರೂ ಹೊರಗೆ ಬಿಟ್ರ? ನಿಮ್ಮ ಯೋಗ್ಯತೆ ನನಗೆ ಗೊತ್ತಿಲ್ಲವೇ ಎಂದು ಟೀಕಿಸಿದರು.

ನಾವು ಯಾರ ಜೊತೆ ಹೋಗುವ ದಾರಿದ್ರ್ಯ ಬಂದಿಲ್ಲ ಎಂದು ಬಿಜೆಪಿ ಮಾಜಿ ಸಚಿವರೊಬ್ಬರು ನೀಡಿರುವ ಹೇಳಿಕೆಗೆ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿ. ನಮಗೂ ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ಬಂದಿಲ್ಲ, ಬಿಜೆಪಿ ಅಧಿಕೃತ ವಿರೋಧ ಪಕ್ಷ ಕೆಲವೊಮ್ಮೆ ಅವರ ಜೊತೆ ಸೇರಿ ಹೋರಾಟ ಮಾಡಬೇಕಾಗುತ್ತದೆ ಹಾಗೆಂದ ಮಾತ್ರಕ್ಕೆ ಯಾರೊಬ್ಬರ ಬಳಿಯು ಭಿಕ್ಷೆ ಬೇಡುವ ಪರಿಸ್ಥಿತಿ ಇಲ್ಲ ಎಂದರು.

Related Articles

Back to top button
error: Content is protected !!