ಕರಾವಳಿ

ಮುಂಗಾರು ಮಳೆ ಚುರುಕು; ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ, ಮೀನುಗಾರರಿಗೆ ಎಚ್ಚರಿಕೆ

Views: 50

ಕನ್ನಡ ಕರಾವಳಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಇಂದು ರಾಜ್ಯಾದ್ಯಂತ ಗುಡುಗು ಮತ್ತು ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ 5ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಕರಾವಳಿಯಲ್ಲಿ ಭಾರಿ ಮಳೆ:

ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಕಳೆದ 24 ಗಂಟೆಗಳಲ್ಲಿ ಉಡುಪಿಯ ಸಿದ್ದಾಪುರ ಹಾಗೂ ಕಾರವಾರ ಭಾಗದಲ್ಲಿ ಗರಿಷ್ಠ 12 ಸೆಂಟಿಮೀಟರ್‌ನಷ್ಟು ಮಳೆ ದಾಖಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29°C ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಉತ್ತರ ಒಳನಾಡಿನ ಭಾಗಗಳಾದ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಗುಡುಗು ಸಹಿತ ಮಳೆಯಾಗಲಿದೆ. ಮೈಸೂರು, ಚಾಮರಾಜನಗರ ಮತ್ತು ಹಾಸನ ಭಾಗಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದೆ ಎಂದು ತಿಳಿಸಿದೆ.

ಮೀನುಗಾರರಿಗೆ ಎಚ್ಚರಿಕೆ,

ಕರಾವಳಿ ತೀರದಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ, ಜುಲೈ 4 ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

Related Articles

Back to top button
error: Content is protected !!