ಜನಮನ

ಮುಂದಿನ 24 ಗಂಟೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗುವ ಮುನ್ಸೂಚನೆ, ಈ ಜಿಲ್ಲೆಗೆ ನಾಳೆ ಶಾಲೆ ಕಾಲೇಜಿಗೆ ರಜೆ

Views: 259

ಕನ್ನಡ ಕರಾವಳಿ ಸುದ್ದಿ: ದಕ್ಷಿಣ ಕನ್ನಡದಲ್ಲಿ ವರುಣನ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆಯು ಜಿಲ್ಲೆಯಾದ್ಯಂತ ಅತ್ಯಂತ ಹಾನಿಕಾರಕ ‘ರೆಡ್ ಅಲರ್ಟ್’ ಘೋಷಿಸಿದೆ. ಮುಂದಿನ 24 ಗಂಟೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ನಿರಂತರ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ (12ನೇ ತರಗತಿ ವರೆಗೆ) ಜುಲೈ 2, 2026 (ಗುರುವಾರ) ರಜೆ ಘೋಷಿಸಲಾಗಿದೆ.

ಆದರೆ ಪದವಿ, ವೈದ್ಯಕೀಯ, ಡಿಪ್ಲೊಮಾ ಹಾಗೂ ಇತರ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ.

ಜಿಲ್ಲಾಡಳಿತವು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತವಾಗಿರಲು ಮನವಿ ಮಾಡಿದೆ. ಮಳೆಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಆದೇಶಗಳನ್ನು ಜಿಲ್ಲಾಡಳಿತ ಪ್ರಕಟಿಸಲಿದೆ.

 

Related Articles

Back to top button
error: Content is protected !!