ಇತರೆ

ಮತದಾರರ ಪಟ್ಟಿ ಕರ್ತವ್ಯಕ್ಕೆ ತೆರಳುವಾಗ ದ್ವಿಚಕ್ರ ವಾಹನ ಅಪಘಾತ: ವಿಲೇಜ್ ಅಕೌಂಟೆಂಟ್ ಸಾವು 

Views: 67

ಕನ್ನಡ ಕರಾವಳಿ ಸುದ್ದಿ: ಮತದಾರರ ಪಟ್ಟಿ  (SIR) ಕರ್ತವ್ಯಕ್ಕೆ ತೆರಳುವಾಗ ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ವಿಎಒ 24 ವರ್ಷದ ಭುವನಾ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ತುಮಕೂರಿನ ಗೂಳೂರು ಬಳಿ ಬೈಕ್ನಲ್ಲಿ ಭುವನಾ ತೆರಳುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿತ್ತು. ಕೂಡಲೇ ಅವರನ್ನು ಚಿಕಿತ್ಸೆಗೆಂದು ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ  ಮೃತಪಟ್ಟಿದ್ದಾರೆ.

ಭುವನ ಸುಮಾರು 6 ವರ್ಷಗಳ ಹಿಂದೆ ಮೆರಿಟ್ ಆಧಾರದಲ್ಲಿ ವಿಲೇಜ್ ಅಕೌಂಟೆಂಟ್ ಆಗಿ ನೇಮಕಗೊಂಡಿದ್ದರು. ಅವರ ಮದುವೆಯೂ ಇತ್ತೀಚೆಗೆ ನಿಶ್ಚಯವಾಗಿತ್ತು. ತುಮಕೂರಿನಲ್ಲಿ ಸ್ನೇಹಿತೆಯೊಂದಿಗೆ ವಾಸವಿದ್ದ ಅವರು ಪ್ರತಿದಿನ ಕರ್ತವ್ಯಕ್ಕೆ ತೆರಳುತ್ತಿದ್ದರು. ಅವರ ಅಕಾಲಿಕ ನಿಧನ ಕುಟುಂಬದ ಕನಸುಗಳನ್ನು ಚೂರುಚೂರಾಗಿಸಿದೆ.

Related Articles

Back to top button
error: Content is protected !!