ಕುಂದಾಪುರ: ವಕ್ವಾಡಿ 8 ಸ್ಟಾರ್ ಕ್ರಿಕೆಟರ್ಸ್ ವತಿಯಿಂದ ಶ್ರಮದಾನ, ಸ್ವಚ್ಛತಾ ಕಾರ್ಯಕ್ರಮ
Views: 88
ಕನ್ನಡ ಕರಾವಳಿ ಸುದ್ದಿ: ನಮ್ಮ ಆರೋಗ್ಯದ ದೃಷ್ಟಿಯಿಂದ ನಾವು ವಾಸಿಸುವ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಈ ದಿಸೆಯಲ್ಲಿ ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಸ್ವಚ್ಛತೆಯ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಇದು ನಮ್ಮ ಮನೆ ಪರಿಸರದಿಂದಲೇ ಪ್ರಾರಂಭಿಸಬೇಕು.
ಈ ನಿಟ್ಟಿನಲ್ಲಿ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿರುವುದು ಮತ್ತು ಸಾರ್ವಜನಿಕರಲ್ಲಿ ನೈರ್ಮಲ್ಯದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಸ್ವಚ್ಛತಾ ಕಾರ್ಯಕ್ರಮವನ್ನು ವಕ್ವಾಡಿಯಲ್ಲಿನ ದೇವರಾಡಿ ಪ್ರತಿಷ್ಠಿತ ಸಂಸ್ಥೆಯಾದ 8 ಸ್ಟಾರ್ ಕ್ರಿಕೆಟರ್ ವತಿಯಿಂದ ವಕ್ವಾಡಿ ಹೂವಿನಕೆರೆ ವಾದಿರಾಜ ಮಠಕ್ಕೆ ಹೋಗುವ ರಸ್ತೆಯಿಂದ ಮಠದವರೆಗಿನ ಒಂದುವರೆ ಕಿಲೋಮೀಟರ್ ರಸ್ತೆಯ ಸುತ್ತಮುತ್ತಲ ಗಿಡಗಂಟಿಗಳನ್ನು ಕಡಿದು ಪ್ಲಾಸ್ಟಿಕ್ ತ್ಯಾಜ್ಯ ಕಸ ಕಡ್ಡಿಗಳನ್ನು ಹೆಕ್ಕಿ ಸ್ವಚ್ಛತಾ ಕಾರ್ಯಕ್ರಮವನ್ನು ಜುಲೈ5 ರಂದು ಯಶಸ್ವಿಯಾಗಿ ನಡೆಸಲಾಯಿತು.
ಈ ಸಮಾಜಮುಖಿ ಕಾರ್ಯದಲ್ಲಿ ಭಾಗವಹಿಸಿ, ಶ್ರಮದಾನ ಮಾಡಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಿದ 8 ಸ್ಟಾರ್ ಕ್ರಿಕೆಟ್ ಕ್ಲಬ್ ಸಂಸ್ಥೆಯ ಎಲ್ಲಾ ಸದಸ್ಯರಿಗೆ ಹೃತ್ಪೂರ್ವಕ ಧನ್ಯವಾದ ಸಲ್ಲಿಸಲಾಯಿತು.






