ಯುವಜನ
ಉಡುಪಿ: ಮದುವೆಯ ಭರವಸೆ ನೀಡಿ ಅಪ್ರಾಪ್ತ ಬಾಲಕಿ 7 ತಿಂಗಳ ಗರ್ಭಿಣಿ; ಮೂವರು ಅರೆಸ್ಟ್
Views: 244
ಕನ್ನಡ ಕರಾವಳಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಿಂದ ಉಡುಪಿಗೆ ಕೆಲಸಕ್ಕೆಂದು ಬಂದಿದ್ದ ಅಪ್ರಾಪ್ತ ವಯಸ್ಕ ಬಾಲಕಿಗೆ ಮದುವೆಯ ಭರವಸೆ ನೀಡಿ ಗರ್ಭವತಿಯನ್ನಾಗಿ ಮಾಡಿದ ಪ್ರಕರಣ ಸಂಬಂಧಿಸಿ ಮೂವರು ಆರೋಪಿಗಳ ವಿರುದ್ಧ ಜು.7ರ ಮಂಗಳವಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಸ್ಸಾಂ ಮೂಲದ ಕುಶಾಲ್, ರಾಜೇಶ್ ಹಾಗೂ ಕೌಶಲ್ ಸೇರಿ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಕಳೆದ ವರ್ಷ ಡಿಸೆಂಬರ್ ತಿಂಗಳಿನಿಂದ ಒಬ್ಬರಾದ ಬಳಿಕ ಒಬ್ಬರು ದುರ್ಬಳಕೆ ಮಾಡುತ್ತಿದ್ದರು.
ಶಿಕ್ಷಣ ಪಡೆಯದ ಬಾಲಕಿ ಸದ್ಯ 7 ತಿಂಗಳ ಗರ್ಭಿಣಿಯಾಗಿದ್ದು, ಆಪ್ತರ ಸಹಾಯದೊಂದಿಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.






