ಸಾಂಸ್ಕೃತಿಕ
ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಕವಿತಾ ಲಂಕೇಶ್ ಪುತ್ರಿ ಇಶಾ
Views: 13
ಕನ್ನಡ ಕರಾವಳಿ ಸುದ್ದಿ: ಪ್ರಸಿದ್ಧ ಲೇಖಕ, ಪತ್ರಕರ್ತ ಪಿ.ಲಂಕೇಶ್ ಮೊಮ್ಮಗಳು, ನಿರ್ದೇಶಕಿ ಕವಿತಾ ಲಂಕೇಶ್ ಪುತ್ರಿ ಇಶಾ ಲಂಕೇಶ್ ನಾಯಕಿಯಾಗಿ ಕನ್ನಡ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಲಂಕೇಶ್ ಕುಟುಂಬದ ಮೂರನೇ ತಲೆಮಾರಿನ ಮತ್ತೊಂದು ಕುಡಿ ಬಣ್ಣದ ಲೋಕಕ್ಕೆ ಅಡಿಯಿಡುತ್ತಿದ್ದಾರೆ.
ದಿಲ್ ರಂಗೀಲಾ, ಜಾನು, ಬಾನ ದಾರಿಯಲ್ಲಿ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ನಿರ್ದೇಶಕ ಪ್ರೀತಂ ಗುಬ್ಬಿ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ನವಿಶಾ ಫಿಲ್ಮ್ಸ್ ಲಾಂಛನದಲ್ಲಿ ಶಿವರಾಜ್ ಕನಗನಪಲ್ಲಿ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದು ಈ ಸಂಸ್ಥೆ ನಿರ್ಮಾಣದ ಎರಡನೇ ಚಿತ್ರವಾಗಿದೆ.
ಈಗಾಗಲೇ ರಂಗಭೂಮಿಯಲ್ಲಿ ಸಾಕಷ್ಟು ಹೆಸರು ಮಾಡಿರುವ ಇಶಾ ಲಂಕೇಶ್, ನಟನೆಗೆ ಬೇಕಾಗಿರುವ ಪೂರ್ವ ತಯಾರಿಗಳನ್ನು ಮಾಡಿಕೊಂಡು ಚಂದನವನಕ್ಕೆ ಅಡಿಯಿಟ್ಟಿದ್ದಾರೆ. ಸದ್ಯ ಇನ್ನೂ ಹೆಸರಿಡದ ಈ ನೂತನ ಚಿತ್ರದ ಮತ್ತಷ್ಟು ಮಾಹಿತಿಯನ್ನು ಸದ್ಯದಲ್ಲೇ ಚಿತ್ರತಂಡ ಹಂಚಿಕೊಳ್ಳಲಿದೆಯಂತೆ.






