ಇತರೆ
ಮಣಿಪಾಲದ ಪರ್ಕಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಶಾಲಾ ಬಸ್!
Views: 120
ಕನ್ನಡ ಕರಾವಳಿ ಸುದ್ದಿ : ಶಾಲೆಗೆ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ಸು ಕಂದಕಕ್ಕೆ ಉರುಳಿ ಬಿದ್ದು ಏಳು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಮಣಿಪಾಲದ ಪರ್ಕಳ ಸಮೀಪ ನಡೆದಿದೆ.
ಒಂದು ಮಗುವಿನ ತಲೆಗೆ ಏಟು ಬಿದ್ದಿದ್ದು, ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಮಣಿಪಾಲದ ಖಾಸಗಿ ಸ್ಕೂಲ್ ಗೆ ಸೇರಿದ ಬಸ್ ಇದಾಗಿದೆ. ರಸ್ತೆಯ ಇನ್ನೊಂದು ಮಗ್ಗುಲಲ್ಲಿ ನಿಂತಿದ್ದ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.






