ಕರಾವಳಿ

ಕೇರಳದ ಮುಖ್ಯಮಂತ್ರಿ ವಿ ಡಿ ಸತೀಶನ್ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ

Views: 55

ಕನ್ನಡ ಕರಾವಳಿ ಸುದ್ದಿ: ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಇಂದು ಶನಿವಾರ ಮುಂಜಾನೆ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಮುಂಜಾನೆಯೇ ದೇವಸ್ಥಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ಭಕ್ತಿಭಾವದಿಂದ ವಿಶೇಷ ಪೂಜೆ ಸಲ್ಲಿಸಿ ರಾಜ್ಯದ ಜನರ ಒಳಿತಿಗಾಗಿ ಪ್ರಾರ್ಥಿಸಿದರು.

ಮುಖ್ಯಮಂತ್ರಿ ಆಗಮನದ ಹಿನ್ನೆಲೆಯಲ್ಲಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. Z-ಪ್ಲಸ್ ಭದ್ರತೆಯ ನಡುವೆ ದೇವಸ್ಥಾನಕ್ಕೆ ಆಗಮಿಸಿದ ಸತೀಶನ್ ಅವರಿಗೆ ಭದ್ರತಾ ಸಿಬ್ಬಂದಿ ಸಂಪೂರ್ಣ ಭದ್ರತೆ ಒದಗಿಸಿದರು.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ವಿ.ಡಿ. ಸತೀಶನ್ ಅವರು ಮೊದಲ ಬಾರಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು ವಿಶೇಷ ಮಹತ್ವ ಪಡೆದಿದೆ. ಅವರು ಶ್ರೀ ಮೂಕಾಂಬಿಕಾ ದೇವಿಯ ಅಪಾರ ಭಕ್ತರಾಗಿದ್ದು, ಹಲವು ವರ್ಷಗಳಿಂದ ಕ್ಷೇತ್ರಕ್ಕೆ ಭೇಟಿ ನೀಡುತ್ತಿರುವುದು ಗಮನಾರ್ಹ.

ವಿಶೇಷ ಪೂಜೆ ಬಳಿಕ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರಿಗೆ ದೇವರ ಪ್ರಸಾದ, ಫಲಕ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು. ದೇವಿಯ ದರ್ಶನ ಹಾಗೂ ವಿಶೇಷ ಪೂಜೆ ಮುಗಿಸಿದ ಬಳಿಕ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಮಂಗಳೂರು ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

Related Articles

Back to top button
error: Content is protected !!