ಚಲಿಸುತ್ತಿದ್ದ ಬಸ್‌ನಲ್ಲೇ ಕಾಲೇಜು ವಿದ್ಯಾರ್ಥಿನಿಯರಿಗೆ ಅಸಭ್ಯ ವರ್ತನೆ: ಕಂಡಕ್ಟರ್ ಬಂಧನ
Views: 86
ಕನ್ನಡ ಕರಾವಳಿ ಸುದ್ದಿ: ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲೇ ಅಸಭ್ಯ ವರ್ತನೆ ಪ್ರದರ್ಶಿಸಿದ್ದ ಕಂಡಕ್ಟರ್‌ನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ಮಂಗಳೂರು ವಿಟ್ಲ ಮಾರ್ಗದಲ್ಲಿ ಸಂಚರಿಸುವ ‘ಸೆಲೇನ’ ಖಾಸಗಿ ಬಸ್‌ನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಬಂಧಿತ ಆರೋಪಿಯನ್ನು ಇರ್ಫಾನ್ (32) ಎಂದು ಗುರುತಿಸಲಾಗಿದ್ದು, ಆತ ಮೂಲತಃ ಉಪ್ಪಿನಂಗಡಿ ಸಮೀಪದ ಕಲ್ಲೇರಿ ನಿವಾಸಿಯಾಗಿದ್ದಾನೆ.
ಕಾಲೇಜು ವಿದ್ಯಾರ್ಥಿನಿಯರೇ ಕಾಮುಕ ಕಂಡಕ್ಟರ್‌ನ ಗುರಿ
ಆರೋಪಿಯು ಚಲಿಸುತ್ತಿದ್ದ ಬಸ್‌ನಲ್ಲೇ ಕಾಲೇಜು ವಿದ್ಯಾರ್ಥಿನಿಯರ ಎದುರು ತನ್ನ ಗುಪ್ತಾಂಗ ಪ್ರದರ್ಶಿಸಿ ಅಸಭ್ಯ ಸನ್ನೆ ಮಾಡಿದ್ದಾನೆ. ಅಲ್ಲದೆ, ಬಸ್‌ನ ಹಿಂದಿನ ಸೀಟಿಗೆ ಬರುವಂತೆ ಕೈ ಸನ್ನೆ ಮಾಡಿ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.
ಆರೋಪಿಯ ಈ ವಿಕೃತ ವರ್ತನೆಯಿಂದ ವಿದ್ಯಾರ್ಥಿನಿಯರು ಆತಂಕಕ್ಕೊಳಗಾಗಿದ್ದು, ಘಟನೆ ಕುರಿತು ದೂರು ದಾಖಲಿಸಿದ ಬಳಿಕ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ.
ದೂರು ಸ್ವೀಕರಿಸಿದ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಅಧಿಕಾರಿಗಳು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.






