ಪತಿಯ ಹುಟ್ಟುಹಬ್ಬ ಆಚರಿಸಲು ಹೋಂಸ್ಟೇಗೆ ಬಂದಿದ್ದ ಪತ್ನಿಯ ಭೀಕರ ಕೊಲೆ!
Views: 82
ಕನ್ನಡ ಕರಾವಳಿ ಸುದ್ದಿ: ಪತಿಯ ಹುಟ್ಟುಹಬ್ಬವನ್ನು ಆಚರಿಸಲು ಹೋಂಸ್ಟೇಗೆ ಬಂದಿದ್ದ ಮಹಿಳೆಯನ್ನು ಆಕೆಯ ಪತಿಯೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಉತ್ತರಾಖಂಡದ ಮಸ್ಸೂರಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆಯ ಶವ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದು ಒಂದು ತಿಂಗಳ ನಂತರ, ಪತಿಯೇ ಈ ಕೊಲೆಯಲ್ಲಿ ಭಾಗಿಯಾಗಿರುವುದು ಪ್ರಾಥಮಿಕ ತನಿಖೆಯಲ್ಲಿ ಸಾಬೀತಾಗಿದೆ.
ಮೂಲತಃ ಆಂಧ್ರಪ್ರದೇಶದ ವಿಶಾಖಪಟ್ಟಣದವರಾದ ಈ ಜೋಡಿ ನವೆಂಬರ್ 8, 2025 ರಂದು ವಿವಾಹವಾಗಿದ್ದರು. ದೆಹಲಿಯಲ್ಲಿ ವಾಸಿಸುತ್ತಿದ್ದ ಇವರು ಪತಿಯ ಬರ್ತ್‌ಡೇ ಆಚರಿಸಲು ಜೂನ್ ತಿಂಗಳಿನಲ್ಲಿ ಮಸ್ಸೂರಿ-ಧನೋಲ್ಟಿ ರಸ್ತೆಯಲ್ಲಿರುವ ಹೋಂಸ್ಟೇಯೊಂದಕ್ಕೆ ಬಂದಿದ್ದರು.
ಆದರೆ ಪೊಲೀಸರು ಕೋಣೆಯನ್ನು ಪರಿಶೀಲಿಸಿದಾಗ ರಾಧಾ ಅವರ ಮೃತದೇಹ ಬಟ್ಟೆಗಳಿಲ್ಲದೆ ನೆಲದ ಮೇಲೆ ಬಿದ್ದಿತ್ತು ಹಾಗೂ ಹಾಸಿಗೆಯ ಬೆಡ್‌ಶೀಟ್ ಮೇಲೆ ರಕ್ತದ ಕಲೆಗಳಿದ್ದವು. ಕೋಣೆಯಲ್ಲಿ ಖಾಲಿ ಮದ್ಯದ ಬಾಟಲಿಗಳು ಚೆಲ್ಲಾಪಿಲ್ಲಿಯಾಗಿದ್ದವು.
ಮಗಳ ಸಾವು ಸಾಮಾನ್ಯ ಸಾವಲ್ಲ, ಇದರ ಹಿಂದೆ ಅಳಿಯನ ಕೈವಾಡವಿದೆ ಎಂದು ಸಂತ್ರಸ್ತೆ ರಾಧಾ ಅವರ ತಂದೆ ಪಿ. ಸುಧಾಕರ್ ಪೊಲೀಸರಿಗೆ ಗಂಭೀರ ದೂರು ನೀಡಿದ್ದರು.
ಮದುವೆಯಾದ ಕೆಲವೇ ತಿಂಗಳುಗಳಲ್ಲಿ ಮಗಳಿಗೆ ನೀಡಲಾಗುತ್ತಿದ್ದ ಕಿರುಕುಳ ಹಾಗೂ ಘಟನಾ ಸ್ಥಳದಲ್ಲಿದ್ದ ಸಾಕ್ಷ್ಯಗಳು ಪತಿಯ ವಿರುದ್ಧವಾಗಿದ್ದರಿಂದ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.






