ಕಂದಾಯ ಇಲಾಖೆಯಲ್ಲಿ 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಆಹ್ವಾನ
Views: 96
ಕನ್ನಡ ಕರಾವಳಿ ಸುದ್ದಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಭರ್ಜರಿ 572 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳಿಗೆ ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ ವಿವರ:
ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಪ್ರಕಟಿಸಿದೆ. ಇದರಲ್ಲಿ ಸಾಮಾನ್ಯ ವಲಯಕ್ಕೆ 505 ಹಾಗು ಕಲ್ಯಾಣ ಕರ್ನಾಟಕಕ್ಕೆ 67 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಅರ್ಹತೆ ಮತ್ತು ವಯೋಮಿತಿ:
18 ರಿಂದ 40-45 ವರ್ಷಗಳ ನಡುವಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಇದರೊಂದಿಗೆ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ ವಯಸ್ಸು ನಿಗದಿ ಮಾಡಲಾಗಿದೆ. ಒಬಿಸಿ ವರ್ಗದವರಿಗೆ ಮೂರು ವರ್ಷ ಮತ್ತು ಎಸ್ ಸಿ ಎಸ್ ಟಿ ವರ್ಗದವರಿಗೆ ಐದು ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ. ಮೀಸಲಾತಿ ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು.
ಸಾಮಾನ್ಯ ಮತ್ತು ಒಬಿಸಿ ವರ್ಗದ (ಪ್ರವರ್ಗ – 2ಎ 2ಬಿ 3ಎ 3ಬಿ) ಅಭ್ಯರ್ಥಿಗಳಿಗೆ 750 ರೂಪಾಯಿ ಶುಲ್ಕ
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಒಬಿಸಿ ವರ್ಗದ (ಪ್ರವರ್ಗ 1) ಅಭ್ಯರ್ಥಿಗಳಿಗೆ 500 ರೂಪಾಯಿ ಶುಲ್ಕ
ಅಂಗವಿಕಲ ಅಭ್ಯರ್ಥಿಗಳಿಗೆ 250 ರೂಪಾಯಿ ಶುಲ್ಕ
ವೇತನ:ಅಧಿಸೂಚನೆಯ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ 34,100 ರೂಪಾಯಿಯಿಂದ 67,600 ರೂಪಾಯಿವರೆಗೆ ವೇತನ ಶ್ರೇಣಿ ದೊರೆಯಲಿದೆ. ಇದರಲ್ಲಿ ಮೂಲ ವೇತನದ ಜೊತೆಗೆ ಸರ್ಕಾರಿ ನಿಯಮಗಳ ಪ್ರಕಾರ ತುಟ್ಟಿ ಭತ್ಯೆ, ಮನೆ ಬಾಡಿಗೆ ಭತ್ಯೆ ಮತ್ತು ಇತರ ಸೌಲಭ್ಯಗಳು ದೊರೆಯುತ್ತವೆ. ಅದರಲ್ಲೂ, ಇದು ರಾಜ್ಯ ಸರ್ಕಾರದ ಗ್ರೂಪ್ ಸಿ ವೃಂದದ ಖಾಯಂ ಹುದ್ದೆಯಾಗಿರುವುದರಿಂದ ಉದ್ಯೋಗ ಭದ್ರತೆ ಇದೆ.
ಪ್ರಮುಖ ದಿನಾಂಕ:
ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ: ಜುಲೈ 11 2026 (ಈಗಾಗಲೇ ಪ್ರಾರಂಭವಾಗಿದೆ)
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 30 2026
ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಜುಲೈ 31 2026
ಲಿಖಿತ ಪರೀಕ್ಷೆ ನಡೆಯುವ ದಿನಾಂಕ:
ಸಾಮಾನ್ಯ ವಲಯದ ಅಭ್ಯರ್ಥಿಗಳಿಗೆ: 04 ಅಕ್ಟೋಬರ್ 2026
ಕಲ್ಯಾಣ ಕರ್ನಾಟಕ ವಲಯದ ಅಭ್ಯರ್ಥಿಗಳಿಗೆ: 25 ಅಕ್ಟೋಬರ್ 2026
ಕಡ್ಡಾಯ ಕನ್ನಡ ಪರೀಕ್ಷೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ
ಪರೀಕ್ಷಾ ಮಾದರಿ ಮತ್ತು ಆಯ್ಕೆ ಪ್ರಕ್ರಿಯೆ:
ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಮೂಲಕ ನಡೆಯಲಿದೆ. ಅದರಂತೆ, ಪರೀಕ್ಷೆಯಲ್ಲಿ ಎರಡು ಪತ್ರಿಕೆಗಳಿರುತ್ತವೆ. ಬೆಳಗ್ಗೆ 10.30 ರಿಂದ 12.30 ರವರೆಗೆ ಮೊದಲ ಪತ್ರಿಕೆ ಮತ್ತು ಮಧ್ಯಾಹ್ನ 2.30 ರಿಂದ 4.30 ರವರೆಗೆ ಎರಡನೇ ಪತ್ರಿಕೆ ನಡೆಯಲಿದೆ. ಇನ್ನೂ, ಪ್ರತಿ ಪತ್ರಿಕೆಗೆ 100 ಅಂಕಗಳು ಮತ್ತು 100 ಪ್ರಶ್ನೆಗಳಿರುತ್ತವೆ. ತಪ್ಪು ಉತ್ತರಕ್ಕೆ 0.25 ನೆಗೆಟಿವ್ ಅಂಕ ಕಡಿತ ಮಾಡಲಾಗುತ್ತದೆ. ಅದ್ರಲ್ಲೂ, ಪರೀಕ್ಷೆಯು ಆಫ್ ಲೈನ್ ಓಎಂಆರ್ ಮಾದರಿಯಲ್ಲಿ ನಡೆಯಲಿದ್ದು, ಮೆರಿಟ್ ಆಧಾರದಲ್ಲಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ.
ಅರ್ಜಿ ಸಲ್ಲಿಕೆ ಲಿಂಕ್:
https://cetonline.karnataka.gov.in/login






